ಸೇಕ್ರೆಡ್ ಹಾರ್ಟ್ ಪ ಪೂ ಕಾಲೇಜು ವಾರ್ಷಿಕ ಕ್ರೀಡಾಕೂಟ

0


ಮಡಂತ್ಯಾರು: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿವಹಿಸಬೇಕು. ಕ್ರೀಡಾ ಸಾಧಕರು ಯಾವ ಸಂದರ್ಭದಲ್ಲಿ ಎಲ್ಲಿಯೂ ಬೇಕಾದರೂ ಗುರುತಿಸಲ್ಪಡುತ್ತಾರೆ. ಉನ್ನತ ಶಿಕ್ಷಣ ಇದ್ದರೆ ಮಾತ್ರ ಕ್ರೀಡೆ. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯು ಸಂಸ್ಕಾರಯುತ ಶಿಕ್ಷಣ ನೀಡುವುದರ ಜೊತೆಗೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ.ಈ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧನೆಗೈದು ಸಂಸ್ಥೆಗೆ ಹಾಗೂ ಹೆತ್ತವರಿಗೆ ಕೀರ್ತಿಯನ್ನು ತರುವಂತಾಗಲಿ ಎಂದು ಮಾಜಿ ರಾಷ್ಟ್ರೀಯ ಕಬ್ಬಡಿ ಆಟಗಾರ ಬಿ.ಹಕೀಂ ಬೆಳ್ತಂಗಡಿ ಹೇಳಿದರು .

ಅವರು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ 40ನೇ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ| ಬೇಸಿಲ್ ವಾಸ್ ಅಧ್ಯಕ್ಷತೆ ವಹಿಸಿದ್ದರು. ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಲಿಯೋ ರೋಡ್ರಿಗಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ಸೇಕ್ರೆಡ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಜೋಸೆಫ್ ಎನ್.ಎಮ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೊಮ್ ಡಿಸೋಜ ಸ್ವಾಗತಿಸಿ, ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್ ವಂದಿಸಿದರು. ಇದೇ ಸಂದರ್ಭದಲ್ಲಿ ಹಕೀಂ ಬೆಳ್ತಂಗಡಿ ಹಾಗೂ ಲಿಯೋ ರೋಡ್ರಿಗಸ್ ಅವರನ್ನು ಸನ್ಮಾನಿಸಲಾಯಿತು. ಕ್ರೀಡಾ ಕಾರ್ಯದರ್ಶಿ ಮಹಮ್ಮದ್ ಇಮ್ತಿಯಾಜ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಹಾಗೂ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕ ಸಂಜಿತ್ ಕುಮಾರ್ ಶೆಟ್ಟಿ ನಿರ್ದೇಶನದಲ್ಲಿ ಸಂಸ್ಥೆಯ ಬೋಧಕ ಬೋಧಕರು ಸಹಕರಿಸಿದರು. ಕನ್ನಡ ಉಪನ್ಯಾಸಕ ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here