ಉಜಿರೆ: ಗ್ರಾಮ ಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ,ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ಜಂಟಿ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸರ್ವಸದಸ್ಯರ ಸಭೆ ಮತ್ತು ವಿಶೇಷ ಮಹಿಳಾ ಗ್ರಾಮ ಸಭೆಯು ನ.22ರಂದು ನಡೆಯಿತು.
ಈ ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ ಅಭಿಯಾನದಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ಮಾಹಿತಿ ನೀಡಲಾಯಿತು.
ಇದೇ ವೇಳೆ ಮಹಿಳೆಯರಿಗೆ ಆರ್ಥಿಕ ಸಲಹೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸದ್ರಿ ಗ್ರಾ.ಪಂ ಅಧ್ಯಕ್ಷೆ ಪುಷ್ಪವತಿ ಆರ್ ಶೆಟ್ಟಿ, ಕಾರ್ಯದರ್ಶಿ ಜಯಂತ್ ಯು.ಬಿ, ಪ್ರಭಾರ ಸಿಡಿಪಿಓ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು , ಕಾರ್ಯದರ್ಶಿ, ಪದಾಧಿಕಾರಿಗಳು, ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಗ್ರಾ.ಪಂ ಸದಸ್ಯರು ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆರು,ತಾಲೂಕು ಐಇಸಿ ಸಂಯೋಜಕರು, ಎಮ್.ಬಿ.ಕೆ , ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
p>