Site icon Suddi Belthangady

ವರ್ಗಾವಣೆ ಗೊಂಡ ಉಜಿರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಂತ್ ಯು. ಬಿ. ಯವರಿಗೆ ಬೀಳ್ಕೊಡುಗೆ

ಉಜಿರೆ : ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಳೆದ 3 ವರ್ಷಗಳಿಂದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಗೊಂಡ ಜಯಂತ್ ಯು. ಬಿ. ಯವರಿಗೆ ಉಜಿರೆ ಗ್ರಾಮ ಪಂಚಾಯತ್ ನಲ್ಲಿ ನ.25 ರಂದು ಬೀಳ್ಕೊಡುಗೆ ಸಮಾರಂಭ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಸದಸ್ಯರು, ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಸಿಬ್ಬಂದಿಗಳು ಹಾಜರಿದ್ದರು.

ಈ ವೇಳೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನೂತನ ಕಾರ್ಯದರ್ಶಿ ಯಾಗಿ ನಿಡ್ಲೆ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿದ್ದ ಶ್ರವಣ ಕುಮಾರ್ ಉಪಸ್ಥಿತರಿದ್ದರು.

Exit mobile version