ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಮಾವೇಶವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ನ.26 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಪ್ರಧಾನ ಸಂಚಾಲಕ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ ರವರು ” ನಮ್ಮ ಜಿಲ್ಲೆಯ ಜೀವನದಿ ನೇತ್ರಾವತಿ ನದಿಯ ಮೇಲೆ ವ್ಯವಸ್ಥಿತವಾಗಿ ಅತ್ಯಾಚಾರ ನಡೆಯುತ್ತಿದ್ದಾಗ ಸುಮ್ಮನಿರುವುದು ಸರಿಯಲ್ಲ , ಇದರ ವಿರುದ್ಧ ಹೋರಾಟ ನಡೆಸುವುದು ನಮ್ಮ ಕರ್ತವ್ಯ ಎಂದರು. ಇದರ ಜೊತೆಗೆ 40% ಕಮಿಷನ್ , ಭೃಷ್ಟಾಚಾರ, ಅಕ್ರಮ-ಸಕ್ರಮ ಯೋಜನೆಯ ಪಕ್ಷಪಾತ , ಕಸ್ತೂರಿರಂಗನ್ ವರದಿ ವಿರುದ್ಧ , ನಿವೇಶನ- ವಸತಿ ಸೌಕರ್ಯಕ್ಕಾಗಿ , ಕುದುರೆಮುಖ ರಾಷ್ಟ್ರೀಯ ಉದ್ಯಾನವನವಾಸಿಗಳಿಗೆ ಮೂಲಭೂತ ಸೌಕರ್ಯಗಳಿಗಾಗಿಯೂ ಈ ಹೋರಾಟ ನಡೆಯಲಿದೆ. ಇದೊಂದು ತಾಲೂಕಿನ ಐತಿಹಾಸಿಕ ಹೋರಾಟ , ಈ ಹೋರಾಟ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ ಎಂದ ಅವರು ಈ ಕಾಲ್ನಡಿಗೆ ಜಾಥವನ್ನು ಯಶಸ್ವಿಗೊಳಿಸಲು ಗ್ರಾಮ ಗ್ರಾಮಗಳಲ್ಲಿ ದುಡಿಯುವ ಅಗತ್ಯವಿದೆ ಎಂದರು.
ಸಭೆಯನ್ನು ಉದ್ದೇಶಿಸಿ ಮಾಜಿ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್ , ಕೆ.ಕೆ ಶಾಹುಲ್ ಹಮೀದ್ ಮಾತನಾಡಿದರು. ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಅನೇಕ ಜನರು ಸಮಾವೇಶದಲ್ಲಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಸಂಚಾಲಕರಾದ ಶೇಖರ್ ಕುಕ್ಕೇಡಿ , ಕೆ.ಕೆ ಶಾಹುಲ್ ಹಮೀದ್ , ಧರಣೇಂದ್ರ ಕುಮಾರ್ , ನಮೀತಾ ಪೂಜಾರಿ ಉಪಸ್ಥಿತರಿದ್ದರು.
ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ ಕಾರ್ಯಕ್ರಮ ನಿರ್ವಹಿಸಿದರು.