Site icon Suddi Belthangady

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ವಾರ್ಷಿಕೋತ್ಸವ

ಬೆಳ್ತಂಗಡಿ :ಶ್ರೀ ಗುರುದೇವ ಎಜುಕೇಷನಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ನ.29 ರಂದು ಶ್ರೀ ನಾರಾಯಣ ಗುರು ಸಂಕೀರ್ಣದ ಸಭಾ ಭವನದಲ್ಲಿ ನಡೆಯಿತು.

ಶ್ರೀ ಗುರುದೇವ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷರು ಮಾಜಿ ಶಾಸಕ ಕೆ. ವಸಂತ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜು ಉಪ ನಿರ್ದೇಶಕ ಜಯಣ್ಣ, ಮಂಗಳೂರು ಶ್ರೀ ಗೋಕರ್ಣಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪದವಿ ಕಾಲೇಜು ಪ್ರಾಂಶುಪಾಲೆ ಡಾ. ಸವಿತಾ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸುಕೇಶ್ ಕುಮಾರ್,   ಉಪ ಪ್ರಾಂಶುಪಾಲ ಶಮಿವುಲ್ಲಾ, ವಿದ್ಯಾರ್ಥಿ ನಾಯಕ ಸುದೀಪ್  ವಿ. ಭಟ್, ಶ್ರವಣ್, ದಿವ್ಯ, ಶ್ರೀನಿಧಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Exit mobile version