ಗುರುವಾಯನಕೆರೆ: ಕೊಂಟುಪಳಿಕೆ ಶಿವಾಜಿನಗರ ನಿವಾಸಿ , ರಿಕ್ಷಾ ಚಾಲಕ ಪ್ರವೀಣ್ ಪಿಂಟೋರವರ ಶವ ಗುರುವಾಯನಕೆರೆ ಕೆರೆಯಲ್ಲಿ ಪತ್ತೆಯಾಗಿದೆ.
ಮಾಲಕರಿಗೆ ಫೋನ್ ಕರೆ ಮೂಲಕ ತಾನು ಆತ್ಮಹತ್ಯೆ ಮಾಡಿರುವುದಾಗಿ ತಿಳಿಸಿದ್ದು, ಮೃತ ವ್ಯಕ್ತಿಯ ಆಧಾರ್ ಕಾರ್ಡ್ ನೀರಿನಲ್ಲಿ ತೇಲಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೆರೆಯಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ತಂಡ ಮತ್ತು ಅಗ್ನಿ ಶಾಮಕ ಠಾಣೆಯವರು ಹುಡುಕಾಟ ನಡೆಸಿದ್ದರು. ಇದೀಗ ಅವರ ಶವವನ್ನು ಮೇಲಕ್ಕೆತ್ತಲಾಗಿದೆ.
p>