ಉಜಿರೆ : ಶ್ರೀ ಧ. ಮ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 10ನೇ ತರಗತಿಯ ಪೋಷಕರ ಸಭೆ ಮತ್ತು ಆರೋಗ್ಯ ಇಲಾಖೆ ವತಿಯಿಂದ ಮೆದುಳು ಜ್ವರ ಮಾಹಿತಿ ನ.26 ರಂದು ನಡೆಯಿತು.
ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹರೀಶ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಮಾಹಿತಿ ನೀಡಿದರು. ಆರೋಗ್ಯ ಇಲಾಖೆ ವತಿಯಿಂದ ಆಗಮಿಸಿದ ಆಶಾ ಕಾರ್ಯಕರ್ತ ಪ್ರಮೀಳಾ ರವರು ಮೆದುಳು ಜ್ವರದ ಲಸಿಕೆಯ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕ ಸಂವಿಧಾನದ ದಿನದ ಮಹತ್ವ ವನ್ನು ತಿಳಿಸುವುದರ ಜೊತೆಗೆ ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸಿದರು.
ರತ್ನಮಾನಸದ ಪಾಲಕ ಯತೀಶ್ ರವರು ಪೋಷಕರುಗಳ ಕುರಿತು ಮಾತನಾಡಿದರು. ಪೋಷಕರಾದ ಇಬ್ರಾಹಿಂ ಕಾರ್ಯಕ್ರಮದ ಕುರಿತು ಮಾತನಾಡಿದರು.ಶಾಲಾ ಮುಖ್ಯೋಪಾಧ್ಯಾಯ ಪದ್ಮರಾಜ್ ಎಸ್.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪೋಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮವು ಹತ್ತನೇ ತರಗತಿಯ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶಿಕ್ಷಕ ಚಂದ್ರಶೇಖರ್ ಭಟ್ ಸ್ವಾಗತಿಸಿದರು, ಶಿಕ್ಷಕ ಸುರೇಶ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತನಾಡಿದರು .ಶಿಕ್ಷಕ ರವೀಶ್ ಧನ್ಯವಾದ ಸಮರ್ಪಿಸಿದರು.