Site icon Suddi Belthangady

ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಶ್ರೀಮತಿ ಸುನಿತಾ ಬಿಯವರಿಗೆ ಮುಂಬಡ್ತಿ

ಪೊಲೀಸ್ ಇಲಾಖೆಯಲ್ಲಿ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಲ್ಮಡ್ಕ ಗ್ರಾಮದ ಸುನಿತಾ ಬಿ.ಯವರು ಮಹಿಳಾ ಹೆಡ್ ಕಾನ್ ಸ್ಟೇಬಲ್ ಆಗಿ ಮುಂಬಡ್ತಿ ಪಡೆದಿದ್ದಾರೆ.


2011ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಇವರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಮೂಲತಃ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿ ದಿ. ಶಿವಪ್ಪ ನಾಯ್ಕ್ ಮತ್ತು ದಿ. ಕಾವೇರಿ ದಂಪತಿಯ ಪುತ್ರಿಯಾಗಿರುವ ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಲ್ಮಡ್ಕ ಸ‌.ಹಿ.ಪ್ರಾ. ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ, ಪಿ.ಯು. ವಿದ್ಯಾಭ್ಯಾಸವನ್ನು ಮಂಗಳೂರಿನ ಬಲ್ಮಟದಲ್ಲಿರುವ ಮಹಿಳಾ ಕಾಲೇಜಿನಲ್ಲಿ, ಪದವಿ ಶಿಕ್ಷಣವನ್ನು ಮಂಗಳೂರು ಯುನಿವರ್ಸಿಟಿ ಕಾಲೇಜಿನಲ್ಲಿ ಹಾಗೂ ಬಿ.ಎಡ್. ಪದವಿಯನ್ನು ಪಾಂಡೇಶ್ವರದ ಶ್ರೀನಿವಾಸ್ ಗ್ರೂಪ್‌ ಆಫ್ ಕಾಲೇಜಿನಲ್ಲಿ ಪಡೆದಿರುತ್ತಾರೆ. ಪ್ರಸ್ತುತ ಇವರು ಬ್ಯೂರೋ ಆಫ್ ಇಮಿಗ್ರೇಷನ್ ವಿಭಾಗ ಅಂತರಾಷ್ಟ್ರೀಯ ವಿಮಾನ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಪತಿ ಕಾಂತೇಶ್ ಕುಮಾರ್, ಪುತ್ರ ಆಕಾಂಕ್ಷ್ ಮತ್ತು ಪುತ್ರಿ ಧ್ರುವಿಕಾ ರೊಂದಿಗೆ‌ ಮಂಗಳೂರಿನಲ್ಲಿ ನೆಲೆಸಿದ್ದಾರೆ

Exit mobile version