Site icon Suddi Belthangady

ಅರಂತೋಡು  ಪದವಿ ಪೂರ್ವ ಕಾಲೇಜು : ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

  ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇದರ ಅಶ್ರಯದಲ್ಲಿ ಪದವಿ ಪೂರ್ವ ಕಾಲೇಜು ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು .

ಸಭಾ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಸಂಚಾಲಕ ಕೆ.ಆರ್ ಗಂಗಾಧರ ವಹಿಸಿದರು.

ಪಾಪ್ಯುಲರ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಕೆ ಆರ್ ಪದ್ಮನಾಭ ದೀಪ ಬೆಳಗಿಸಿ ಉದ್ಘಾಟಿಸಿದರು .ಮುಖ್ಯ ಅತಿಥಿಗಳಾಗಿ ಅರಂತೋಡು ತೊಡಿಕಾನ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ನಿವೃತ ಶಿಕ್ಷಕ ಜತ್ತಪ್ಪ ಮಾಸ್ತರ್ ಅಳಿಕೆ,ನಿವೃತ ದೈಹಿಕ ಶಿಕ್ಷಣ ಶಿಕ್ಷಕ ಎ.ಸಿ.ವಸಂತ,ನೆ.ಸ್ಮಾ.ಪ.ಪೂ.ಕಾಲೇಜು ಮುಖ್ಯೋಪಾಧ್ಯಾಯ ಎಂ.ಕೆ.ಸೀತಾರಾಮ ,ಜಿಲ್ಲಾ ಕ್ರೀಡಾ ಸಂಯೋಜಕ ಅರುಣ ಡಿ ಸೋಜಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .ಕಾಲೇಜು ಪ್ರಾಂಶುಪಾಲ ರಮೇಶ್ ಎಸ್ ಸ್ವಾಗತಿಸಿ ಶಿಕ್ಷಕಿ ಅಶ್ವಿನಿ ವಂದಿಸಿದರು.ಶಿಕ್ಷಕ ಕಿಶೋರ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು .

Exit mobile version