ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ಬಿಳಿಮಲೆಯವರು ರಾಜೀನಾಮೆ ನೀಡಿದ್ದಾರೆ.
ರಾಜಿನಾಮೆ ಮುಂದಿನ ಸಾಮಾನ್ಯ ಸಭೆಯಲ್ಲಿ ಅಂಗೀಕಾರಗೊಂಡು ಮೇಲಾಧಿಕಾರಿಗಳಿಂದ ಅನುಮೋದನೆಗೊಂಡ ಬಳಿಕ ಮುಂದಿನ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ತಿಳಿದುಬಂದಿದೆ. ವೈಯಕ್ತಿಕ ಕಾರಣಗಳಿಂದ ರಾಜೀನಾನೆ ನೀಡಿರುವುದಾಗಿ ವಿಶ್ವನಾಥ ಬಿಳಿಮಲೆಯವರು ಸುದ್ದಿಗೆ ತಿಳಿಸಿದ್ದಾರೆ.