Site icon Suddi Belthangady

ಕನಕಮಜಲು ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ

 

ಮೋಹನ್ ರಾಂ ಸುಳ್ಳಿ ಅವರಿಂದ ಧ್ವಜಾರೋಹಣ

ಸಹಕಾರರತ್ನ ಡಾ ಎಂ‌. ಎನ್. ರಾಜೇಂದ್ರ ಕುಮಾರ್ ಅವರಿಂದ ಅಡ್ಕಾರು ಗೋದಾಮು ಕಟ್ಟಡ ಉದ್ಘಾಟನೆ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವದ ಅಂಗವಾಗಿ ಕನಕಮಜಲಿನ ಸಂಘದ ಪ್ರಧಾನ ಕಛೇರಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.

ಬಳಿಕ ಅಲ್ಲಿಂದ ಹೊರಟ ರೈತ ಜಾಥವು ಜಾಲ್ಸೂರು ಮೂಲಕ ಸಾಗಿ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ವರೆಗೆ ಸಾಗಿ ಬಂದಿತು.


ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರರತ್ನ ಡಾ. ಎಂ‌.ಎನ್. ರಾಜೇಂದ್ರ ಕುಮಾರ್ ಅವರು ಅಡ್ಕಾರಿನ ನೂತನ ಗೋದಾಮು ಕಟ್ಟಡವನ್ನು ಉದ್ಘಾಟಿಸಿದರು. ಅಲ್ಲಿಂದ ಹೊರಟ ವಾಹನ ಮೆರವಣಿಗೆಯು ಅಡ್ಕಾರಿನ ಪಯಸ್ವಿನಿ ನದಿ ತಟದಲ್ಲಿರುವ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವಠಾರಕ್ಕೆ ಸಾಗಿ ಬಂದಿತು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಶತಮಾನೋತ್ಸವ ಸಲಹಾ ಸಮಿತಿಯ ಗೌರವ ಸಲಹೆಗಾರ ‌ನ.ಸೀತಾರಾಮ, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಲ್ಯೊಟ್ಟು, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ನಿರ್ದೇಶಕರುಗಳಾದ ಕರುಣಾಕರ ರೈ ಕುಕ್ಕಂದೂರು, ಶ್ರೀಕೃಷ್ಣ ಭಟ್ ನೆಡಿಲು, ಮಹೇಶ್ವರ ಕಾರಿಂಜ, ಗಣೇಶ್ ಅಂಬಾಡಿಮೂಲೆ, ಶ್ರೀಮತಿ ಸಾವಿತ್ರಿ ಕಾರಿಂಜ, ಶ್ರೀಮತಿ ಭಾರತಿ ಕಜೆಗದ್ದೆ, ಶ್ರೀಮತಿ ಪ್ರೇಮಲತಾ ಪಲ್ಲತ್ತಡ್ಕ, ಸೀತಾರಾಮ ಮಠ, ಶೇಷಪ್ಪ ನಾಯ್ಕ ಕಜೆಗದ್ದೆ, ಸುಖೇಶ್ ಅಡ್ಕಾರುಪದವು, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಬಾಲಕೃಷ್ಣ ಪುತ್ಯ, ಸಂಘದ ಕಾನೂನು ಸಲಹೆಗಾರರುಗಳಾದ ದೇವಿಪ್ರಸಾದ್ ಆಳ್ವ, ಚಂದ್ರಶೇಖರ ಕೆ. ಸೇರಿದಂತೆ ಸಹಕಾರಿ ಸಂಘದ ಸಿಬ್ಬಂದಿಗಳು, ಶತಮಾನೋತ್ಸವ ಸಲಹಾ ಸಮಿತಿಯ ಪದಾಧಿಕಾರಿಗಳು, ವಿವಿಧ ಉಪಸಮಿತಿಯ ಪದಾಧಿಕಾರಿಗಳು ಸೇರಿದಂತೆ ಜಾಲ್ಸೂರು ಹಾಗೂ ಕನಕಮಜಲು ಗ್ರಾಮದ ಸಹಕಾರಿ ಬಂಧುಗಳು ಉಪಸ್ಥಿತರಿದ್ದರು.

Exit mobile version