ಚೆಂಬು : ಕಡವೆ ಕೊಂದ ಆರೋಪಿಗಳ ಬಂಧನ

0

ಕಡವೆಯನ್ನು ಕೊಂದು ಮಾಂಸ ಮಾಡಿದ ಪ್ರಕರಣವನ್ನು ಪತ್ತೆ ಹಚ್ಚಿದ ಸಂಪಾಜೆ ವಲಯಾರಣ್ಯದ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ.

 

ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ರಕ್ಷಿತಾರಣ್ಯದಿಂದ ಕಡವೆಯೊಂದನ್ನು ಹೊಡೆದು ಕೊಂದು ಮಾಂಸ ಮಾಡಿದ್ದು, ಪ್ರಕರಣವನ್ನು ಸಂಪಾಜೆ ವಲಯಾರಣ್ಯದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ದಬ್ಬಡ್ಕ ಗ್ರಾಮ ನಿವಾಸಿಗಳಾದ ಕೃಷ್ಣಪ್ಪ(47), ಪುರುಷೋತ್ತಮ ಕೆ.ಎಸ್.(48) ಬಂಧಿತ ಆರೋಪಿಗಳು. Share ಬಂಧಿತರಿಂದ 100 ಕೆ.ಜಿ ಕಡವೆ ಮಾಂಸ, ಕತ್ತಿ, ಟಾರ್ಪಲ್ ಸೇರಿದಂತೆ ಮತ್ತಿತ್ತರ ವಸ್ತುಗಳ ವಶ ಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯಿದೆ ಅಡಿ ಪ್ರಕರಣ ದಾಖಲು ಮಾಡಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಹಾಗೂ ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಎಂ.ಕೆ. ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ರಕ್ಷಕರಾದ ಕಾರ್ತಿಕ್, ಅರಣ್ಯ ವೀಕ್ಷಕರಾದ ಕೂಸಪ್ಪ, ಮನೋಜ್ ಕುಮಾರ್, ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

 

LEAVE A REPLY

Please enter your comment!
Please enter your name here