ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ವಿಭಾಗದಿಂದ ಉಪನ್ಯಾಸಕರುಗಳಿಗೆ ಮೂರು ದಿನಗಳ ಕಾರ್ಯಾಗಾರ

0

ನೂತನ ಶೈಕ್ಷಣಿಕ ಪದ್ಧತಿಯಲ್ಲಿ ತಾಂತ್ರಿಕ ವಿಷಯದ ಬಗ್ಗೆ ಒಲವು ಮೂಡಿಸಿಕೊಳ್ಳಬೇಕು :  ಡಾ.ಆರ್.ಪಿ.

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಇದರ ಆಶ್ರಯದಲ್ಲಿ ಮೂರು ದಿನದ Faculty Development Programme  ಕಾರ್ಯಾಗಾರದ ಉದ್ಘಾಟಣೆ ಅ. 27 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

 

 

ಈ ಕಾರ್ಯಕ್ರಮವು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರವಾಗಿ ಹೊಸ ತಾಂತ್ರಿಕ ವಿಷಯದ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರವಾಗಿದೆ. ಈ ಕಾರ್ಯಾಗಾರಕ್ಕೆ ವಿವಿಧ ತಾಂತ್ರಿಕ ಕಾಲೇಜಿನ ಪ್ರಾಧ್ಯಾಪಕ ವೃಂದದವರು ಭಾಗವಹಿಸಲಿದ್ದಾರೆ. ಸಮಾರಂಭದ ಮುಖ್ಯ ಅತಿಥಿಯಾಗಿ ಎ.ಒ.ಎಲ್.ಇ  ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ.ಯವರು ಭಾಗವಹಿಸಿ ಪ್ರಸ್ತುತ ಹೊಸ ಶೈಕ್ಷಣಿಕ ಪದ್ಧತಿಯ ಅನುಸಾರವಾಗಿ ಹೊಸ ತಾಂತ್ರಿಕ ವಿಷಯದ ಬಗ್ಗೆ ಒಲವು ಮೂಡಿಸಿಕೊಳ್ಳಬೇಕೆಂದು ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿ ಸಮೂಹಕ್ಕೆ ಕರೆ ನೀಡಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ. ಯವರು ಅತಿಥಿಯಾಗಿ ಭಾಗವಹಿಸಿ ಜಗತ್ತಿನ ಆಧುನಿಕ ತಂತ್ರಜ್ಞಾನದಲ್ಲಿ ತಮ್ಮನ್ನು ತೊಡಗಿಸಿಕೊಂಡು ತಾವೇ ಆಧುನೀಕರಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಂಶುಪಾಲರು ಡಾ. ಸುರೇಶ ವಿ. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು.

ಇದೇ ಸಂದರ್ಭದಲ್ಲಿ ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಡಾ. ಉಮಾಶಂಕರ್ ಕೆ.ಎಸ್. ಮಾತನಾಡಿ ಕಾರ್ಯಾಗಾರದ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ವಿಭಾಗ ಮುಖ್ಯಸ್ಥರು ಡಾ. ಕುಸುಮಾಧರ ಎಸ್. ಕಾರ್ಯಾಗಾರದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಡೀನ್-ರೀಸರ್ಚ್ ಡಾ. ಸವಿತಾ ಸಿ.ಕೆ., ಡೀನ್ ಹಾಸ್ಟೆಲ್ ಡಾ. ಭಾಗ್ಯ ಹೆಚ್.ಕೆ., ಡೈರೆಕ್ಟರ್ ಆಫ್ ಪಿ.ಜಿ. ಸ್ಟಡೀಸ್ ಡಾ. ಸವಿತಾ ಎಂ., ಎನ್.ಎಸ್.ಎಸ್. ಘಟಕಾಧಿಕಾರಿ ಡಾ. ಪ್ರಜ್ಞಾ ಎಂ.ಆರ್., ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ್ ಎಸ್. ಬೇಲೆಗದ್ದೆ ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕು. ಅನ್ವಿತಾ ಪ್ರಾರ್ಥಿಸಿ, ಇಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕರುಗಳಾದ ಪ್ರೊ. ರೇಖಾ ಎಂ.ಬಿ. ಸ್ವಾಗತಿಸಿ ಪ್ರೊ. ಲೋಕೇಶ್ ಪಿ.ಸಿ. ವಂದಿಸಿದರು. ಪ್ರೊ. ಅರುಣ ಪಿ.ಜಿ. ಕಾರ್ಯಕ್ರಮವನ್ನು ನಿರೂಪಿಸಿದರು.

 

LEAVE A REPLY

Please enter your comment!
Please enter your name here