ಆಲೆಟ್ಟಿ ಗ್ರಾಮ ಪಂಚಾಯತ್ ವತಿಯಿಂದ ಮತ್ತು ಪಶು ಸಂಗೋಪನಾ ಇಲಾಖೆಯ ವತಿಯಿಂದ ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಚುಚ್ಚುಮದ್ದು ಲಸಿಕೆ ಹಾಕಿಸುವ ಕಾರ್ಯಕ್ರಮವನ್ನು ಪೈಂಬೆಚ್ಚಾಲು ಭಾಗದಲ್ಲಿ ಪ. ಜಾತಿ ಕಾಲೋನಿಯಲ್ಲಿ ಹಾಗೂ ಕೂಳಿಯಡ್ಕ ಮತ್ತು ಕುಡೆಂಬಿಯಲ್ಲಿ ಅ.29 ರಂದು ಹಮ್ಮಿಕೊಳ್ಳಲಾಯಿತು. ಸುಮಾರು 62 ನಾಯಿಗಳಿಗೆ ಲಸಿಕೆಯನ್ನು ಕೊಡಲಾಯಿತು.
ಈ ಸಂದರ್ಭದಲ್ಲಿ ಪಶು ಸಂಗೋಪನೆ ಇಲಾಖೆಯ ಅಧಿಕಾರಿ ಡಾ.ನಿತಿನ್ ಪ್ರಭು, ಇಲಾಖೆಯ ಸಿಬ್ಬಂದಿಗಳು, ಪಂಚಾಯತ್ ಕಾರ್ಯದರ್ಶಿ ಸೃಜನ್, ಸಿಬ್ಬಂದಿಗಳು, ಪಂಚಾಯತ್ ಉಪಾಧ್ಯಕ್ಷ ದಿನೇಶ್ ಕಣಕ್ಕೂರು, ವಾರ್ಡಿನ ಪಂಚಾಯತ್ ಸದಸ್ಯ ಧರ್ಮಪಾಲ ಕೊಯಿಂಗಾಜೆ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.