ಸುಳ್ಯ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

0

 

ಸುಳ್ಯ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಸಮಗ್ರ, ಸಂತ ಬ್ರಿಜಿಡ್ಸ್, ಸುಳ್ಯ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ದ್ವಿತೀಯ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಯನಗರ ಇದರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಅಕ್ಟೋಬರ್ 29ರಂದು ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು.

ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗ, ಪ್ರೌಢಶಾಲಾ ಎಂಟನೇ ತರಗತಿ ವಿಭಾಗ, ಪ್ರಾಥಮಿಕ ಶಾಲಾ ವಿಭಾಗದ ಮೂರು ಟ್ರೋಫಿಯನ್ನು ಪಡೆದುಕೊಂಡು ಸಮಗ್ರ ಪ್ರಶಸ್ತಿಯನ್ನು ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಸುಳ್ಯ ಪಡೆದುಕೊಂಡಿತು. ಪ್ರಾಥಮಿಕ ಶಾಲಾ ವಿಭಾಗದ ದ್ವಿತೀಯ ಸ್ಥಾನವನ್ನು ಸಂತ ಬ್ರಿಜೆಡ್ಸ್ ಶಾಲೆ ಸುಳ್ಯ ಪಡೆದುಕೊಂಡರೆ ಪ್ರೌಢಶಾಲಾ ವಿಭಾಗ ಮತ್ತು ಪ್ರೌಢಶಾಲಾ 8ನೇ ತರಗತಿ ವಿಭಾಗದ ದ್ವಿತೀಯ 2 ಸ್ಥಾನವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜ್ ಸುಳ್ಯ ಪಡೆದುಕೊಂಡಿತು.


ಬೆಳಿಗ್ಗೆ ನಡೆದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಹಿಸಿದ್ದರು.
ಸುಳ್ಯ ಜೂನಿಯರ್ ಕಾಲೇಜ್ ಪ್ರಾಂಶುಪಾಲರಾದ ಮೋಹನ್ ಕುಮಾರ್ ದೀಪ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ವೇದಿಕೆಯಲ್ಲಿ ಶಾಲಾ ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತಾಯ, ನಗರ ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ಭಟ್ ಕೊಡಂಕೇರಿ, ಶಿಲ್ಪಾ ಸುದೇವ್, ಸುಳ್ಯ ತಾಲೂಕು ದೈಹಿಕ ಶಿಕ್ಷಕರ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್, ಸುಳ್ಯ ಪದವಿ ಪೂರ್ವ ಕಾಲೇಜು ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಕಾಡುತೋಟ,ಗ್ರೇಡ್ 2 ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಮೇಲ್ಕಜೆ, ಶಾಂತಿನಗರ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನಜೀರ್ ಶಾಂತಿನಗರ,ಜಯನಗರ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಶ್ರೀಮತಿ ಲಾವಣ್ಯ, ಶಾಂತಿನಗರ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ತುಳಸಿ, ಜಯನಗರ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ,ಸುದ್ದಿ ಪತ್ರಿಕೆ ವರದಿಗಾರ ಕೆ ಟಿ ಭಾಗೇಶ್, ಶಾಲಾ ಎಸ್ ಡಿ ಎಂ ಸಿ ಸದಸ್ಯರು,ಅಧ್ಯಾಪಕರುಗಳು ಉಪಸ್ಥಿತರಿದ್ದರು.
ಕ್ರೀಡಾಕೂಟದ ದಾಖಲೆ ವಿಭಾಗದ ಮುಖ್ಯಸ್ಥರಾಗಿ ಶಾಂತಿನಗರ ಶಾಲಾ ದೈಹಿಕ ಶಿಕ್ಷಕ ರಘುನಾಥ್ ಶೆಟ್ಟಿ ಸಹಕರಿಸಿದರು. ಸುಳ್ಯ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಕ ಶಿಕ್ಷಕಿಯರು ಕ್ರೀಡಾಕೂಟದ ನಿರ್ಣಾಯಕರಾಗಿ, ದಾಖಲೆ ಪತ್ರಗಳ ವಿಭಾಗದಲ್ಲಿ ಸಹಕಾರ ನೀಡಿದರು.
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶಾಲಾ ಶಿಕ್ಷಕರು ಶಿಕ್ಷಕಿಯರು, ಎಸ್ ಡಿ ಎಮ್ ಸಿ ಸದಸ್ಯರುಗಳು ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ

ವಿದ್ಯಾರ್ಥಿಗಳಿಗೆ ಟ್ರೋಫಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಂತಿನಗರ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನಜೀರ್ ಶಾಂತಿನಗರ, ಸರ್ಕಾರಿ ಜೂನಿಯರ್ ಕಾಲೇಜ್ ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತಾಯ, ಜಯನಗರ ಶಾಲಾ ದೈಹಿಕ ಶಿಕ್ಷಕ ತೀರ್ಥರಾಮ ಅಡ್ಕಬಳೆ, ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಕರಾದ ನಟರಾಜ್, ಯೂಸುಫ್ ಮಾಸ್ಟರ್ , ಹಾಗೂ ತಾಲೂಕಿನ ಬೇರೆ ಬೇರೆ ಶಾಲೆಗಳ ದೈಹಿಕ ಶಿಕ್ಷಕ,ಶಿಕ್ಷಕಿ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಕ ರಘುನಾಥ್ ಶೆಟ್ಟಿ ಸ್ವಾಗತಿಸಿ ಜಯನಗರ ಶಾಲಾ ಶಿಕ್ಷಕಿ ಮಮತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here