ಐವರ್ನಾಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

0

 

ತಲೆಹೊರೆ ವ್ಯಾಪಾರಕ್ಕೆ ಪಂಚಾಯತ್ ಅನುಮತಿ ಕಡ್ಡಾಯ

ಐವರ್ನಾಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಇತ್ತೀಚೆಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸ್ವಾಗತಿಸಿದರು.


ಪಂಚಾಯತ್ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆಗಳು ನಡೆದವು.
ಪಂಚಾಯತ್ ವ್ಯಾಪ್ತಿಯಲ್ಲಿ ತಲೆಹೊರೆ ವ್ಯಾಪಾರಕ್ಕೆ ನಿರ್ಬಂಧ ಏರುವ ಬಗ್ಗೆ ಪ್ರಸ್ತಾಪವಾಯಿತು.
ಚರ್ಚೆಯ ಬಳಿಕ ತಲೆಹೊರೆ ವ್ಯಾಪಾರ ಮಾಡುವವರು ಪಂಚಾಯತ್ ನ ಅನುಮತಿ ಪಡೆದು ವ್ಯಾಪಾರ ಮಾಡುವಂತೆ ನಿರ್ಣಯಿಸಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಸದಸ್ಯರಾದ ಯೋಗೀಶ ಕಲ್ಲಗದ್ದೆ, ಸತೀಶ ಜಬಳೆ,ರಂಜನ್ ಮೂಲೆತೋಟ, ನಳಿನಿ ಕೋಡ್ತೀಲು,ಸುಂದರಲಿಂಗಂ, ದೇವಿಪ್ರಸಾದ್ ಕೊಪ್ಪತ್ತಡ್ಕ, ಶ್ರೀಮತಿ ಶರ್ಮಿಳಾ, ಶ್ರೀಮತಿ ಶಶಿಕಲಾ, ಶ್ರೀಮತಿ ಲೀಲಾವತಿ, ಶ್ರೀಮತಿ ಮಮತಾ, ಶ್ರೀಮತಿ ಚಂದ್ರಕಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here