ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಸಂಸ್ಥೆಯ ಪ್ರಾರಂಭೋತ್ಸವ

0

ಸುಳ್ಯದ ರೋಟರಿ ಪದವಿಪೂರ್ವ ಕಾಲೇಜು ಮಿತ್ತಡ್ಕ ಇದರ ಯುವ ರೆಡ್ ಕ್ರಾಸ್ ಸಂಸ್ಥೆಯ ಪ್ರಾರಂಭೋತ್ಸವವು ಅ.29 ರಂದು ನಡೆಯಿತು.

ಸಂಸ್ಥೆಯ ಸಂಚಾಲಕ ಗಿರಿಜಾ ಶಂಕರ್ ತುದಿಯಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯದ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ ಬಿ ಸುಧಾಕರ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಘಟಕ ಇದರ ಜಿಲ್ಲಾ ಪ್ರತಿನಿಧಿ ಸಿ.ಎ. ಗಣೇಶ್ ಭಟ್ ಉಪಸ್ಥಿತರಿದ್ದು, ರೆಡ್ ಕ್ರಾಸ್ ಸಂಸ್ಥೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಶ್ರೀಮತಿ ಮೀನಾಕ್ಷಿ ಕೊಂರ್ಬಡ್ಕ, ದಯಾನಂದ ಆಳ್ವ, ರೋಟರಿ ಪಿ ಯು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮೆಟ್ಟಿ , ರೋಟರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ , ಸಂಸ್ಥೆಯ ಉಪನ್ಯಾಸಕರು ಮತ್ತು ಜೂನಿಯರ್ ರೆಡಿಕ್ರಾಸ್ ಘಟಕ ಇದರ ಕೌನ್ಸಿಲರ್ ಹರ್ಷಿತ್ ಜಿ.ಜೆ. ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ಪ್ರತಿನಿಧಿಗಳಾಗಿ ದ್ವಿತೀಯ ವಾಣಿಜ್ಯ ವಿಭಾಗದ ದಿಶಾಲಕ್ಷ್ಮಿ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಶ್ರವಣ್ ಶೇಡಿಕಜೆ ಭಾಗವಹಿಸಿದ್ದರು. ದಿಶಾಲಕ್ಷ್ಮಿ ಸ್ವಾಗತಿಸಿ, ಜೀವನ್ ವಂದಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here