ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿರುವ ನಾಡಪ್ರಭು ಕೆಂಪೇ ಗೌಡ ಕಂಚಿನ ಪ್ರತಿಯೆಯ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ ರಾಜ್ಯದಾದ್ಯಂತ ನಡೆಯುತ್ತಿದ್ದು, ಈ ಅಭಿಯಾನ ರಥವು ಅ.31 ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬಳಿ ಆಗಮಿಸಿದ್ದು ಅಲ್ಲಿ ಅದನ್ನು ಸ್ವಾಗತಿಸಲಾಯಿತು. ಪವಿತ್ರ ಮೂಲ ಮೃತ್ತಿಕೆ ಸಂಗ್ರಹಿಸಲಾಯಿತು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸುಬ್ರಹ್ಮಣ್ಯ ಗ್ರಾ.ಪಂ ಪಿಡಿಒ ಯು ಡಿ ಶೇಖರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.