Site icon Suddi Belthangady

ಕೋಲ್ಚಾರು ಸರಕಾರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ- 100 ಮೀಟರ್ ಉದ್ದದ ಕನ್ನಡ ಬಾವುಟದೊಂದಿಗೆ ಮೆರವಣಿಗೆ

 

ಕೋಲ್ಚಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಆಚರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು‌ ಸುಮಾರು 100 ಮೀಟರ್ ಉದ್ದದ ಕನ್ನಡ ಬಾವುಟದೊಂದಿಗೆ ಕೋಲ್ಚಾರಿನ‌ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಯಲ್ಲಿ ಸಾಗಿದರು. ಬೆಂಗಳೂರಿನ ಕನ್ನಡದ ಮನಸ್ಸುಗಳ ತಂಡ ಬಾವುಟವನ್ನು ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ರು,ಸದಸ್ಯರು, ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಅದ್ಯಾಪಕ‌ ವೃಂದದವರು, ಎಸ್.ಡಿ.ಎಂ.ಸಿ.ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯ ಕನ್ನಡಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Exit mobile version