Site icon Suddi Belthangady

ಪಂಜ ಲಯನ್ಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ

 

ಪಂಜ ಲಯನ್ಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ.1.ರಂದು ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಪುರುಷೋತ್ತಮ
ದಂಬೆಕೋಡಿ ವಹಿಸಿದರು.

 

ಮುಖ್ಯ ಅತಿಥಿಗಳಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಜದ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ, ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರನೇರಳ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ನಿಕಟ ಪೂರ್ವಾಧ್ಯಕ್ಷ ಸಂತೋಷ್ ಜಾಕೆ, ಕಾರ್ಯದರ್ಶಿ ನಾಗೇಶ್ ಕಿನ್ನಿಕುಮೇರಿ, ಕೋಶಾಧಿಕಾರಿ
ಕರುಣಾಕರ ಎಣ್ಣೆಮಜಲು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಾಸುದೇವ ಮೇಲ್ಪಾಡಿ ವೇದಿಕೆಗೆ ಆಹ್ವಾನಿಸಿದರು. ಆನಂದ ಜಳಕದಹೊಳೆ ಪ್ರಾರ್ಥಿಸಿದರು. ಪುರುಷೋತ್ತಮ ದಂಬೆಕೋಡಿ ಸ್ವಾಗತಿಸಿದರು.ಬಹುಮಾನ ವಿಜೇತರ ಪಟ್ಟಿಯನ್ನು ಶಿಕ್ಷಕಿ ಶ್ರೀಮತಿ ನೇತ್ರಾವತಿ ಓದಿದರು.ನಾಗೇಶ್ ಕಿನ್ನಿಕುಮೇರಿ ವಂದಿಸಿದರು.

Exit mobile version