ಕೆವಿಜಿ ಐಪಿಎಸ್ ನಲ್ಲಿ 67ನೇ ಕನ್ನಡ ರಾಜ್ಯೋತ್ಸವ

0

 

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಶಾಲಾ ಸಭಾಂಗಣದಲ್ಲಿ ನ. 2 ರಂದು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು.

ಪ್ರಾರ್ಥನೆಯೊಂದಿಗೆ ಆರನೇ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿಕೊಂಡ ಕನ್ನಡ ಶಿಕ್ಷಕಿ ಶ್ರೀಮತಿ ಜಯಂತಿ ‘ ಕನ್ನಡ ನಾಡು ನುಡಿಯ ಬಗ್ಗೆ ‘ ವಿದ್ಯಾರ್ಥಿಗಳಿಗೆ ತಿಳಿಸಿದರು. ಆರನೇ ತರಗತಿಯ ಜುಮಾನ ಮತ್ತು ಅವನಿ ಈ ಪುಣ್ಯಭೂಮಿಯ ಬಗ್ಗೆ ಮತ್ತಷ್ಟು ಮಾಹಿತಿಯನ್ನು ತಿಳಿಸಿದರು. ಆರನೇ ತರಗತಿಯ ವಿದ್ಯಾರ್ಥಿಗಳು ಹಾಡು, ನೃತ್ಯ ಮತ್ತು ನಾಟಕಗಳ ಮೂಲಕ ಎಲ್ಲರನ್ನು ಮನರಂಜಿಸಿದರು.

ಈ ಕಾರ್ಯಕ್ರಮವನ್ನು ಆರನೇ ತರಗತಿಯ ಪ್ರತೀಕ್ಷ ಮತ್ತು ಅನಿಂಧ್ಯಾ ಶ್ಯಾಮ್ ಸಾತ್ವಿಕ್ ನಿರೂಪಿಸಿದರು. ಹಾನಿಯ ಸ್ವಾಗತಿಸಿ, ಮೋಹಕ್ ವಂದಿಸಿದನು. ಶಿಕ್ಷಕಿಯರಾದ ಶ್ರೀಮತಿ ರೇಣುಕಾ ಮತ್ತು ಶ್ರೀಮತಿ ಜ್ಯೋತ್ಸ್ನಾ ಸಹಕರಿಸಿದರು. ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here