ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮಣೇಲು:ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತಕ್ಕೆ ಚಾಲನೆ

0

ಕರಿಮೇಣಲು: ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮೇಣಲು ಇಲ್ಲಿನ ಬ್ರಹ್ಮಕಲಶೋತ್ಸವವು ಡಿ. 24 ರಿಂದ 30 ರ ವರೆಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ವಿವಿಧ ವೈದಿಕ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಬ್ರಹ್ಮಕಲಶೋತ್ಸವದ ಮೊದಲ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ನಡ್ವಂತಾಡಿ ಉದಯ ಪಾಂಗಣ್ಣಾಯರ ನೇತೃತ್ವದಲ್ಲಿ ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here