ಬೆಳ್ತಂಗಡಿ: ಭಾರತೀಯ ಜನತಾಪಾರ್ಟಿ ಬೆಳ್ತಂಗಡಿ ಮಂಡಲ ಇದರ ಪದಾಧಿಕಾರಿಗಳ ಸಭೆ ಡಿ.6ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಾಜಿ ಶಾಸಕ ಪ್ರಭಾಕರ ಬಂಗೇರ, ನ.ಪಂ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಜಿಲ್ಲಾ ಎಸ್ ಟಿ ಮೊರ್ಚಾದ ಅಧ್ಯಕ್ಷ ಚೆನ್ನಕೇಶವ , ಜಿಲ್ಲಾ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ, ಧನಲಕ್ಷ್ಮೀ ಜನಾರ್ಧನ್, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಜೋಯೆಲ್ ಮೆಂಡೋನ್ಸ , ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ ಮತ್ತು ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.
p>