ಲಾಯಿಲ: ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮಪಂಚಾಯಿತಿಯ ಸಭಾಭಾವನದಲ್ಲಿ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ತರಬೇತಿಯನ್ನು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಮತ್ತು ನೀರುಗಂಟಿಯವರಿಗೆ ಡಿ.7ರಂದು ತರಬೇತಿಯನ್ನು ಆಯೋಜಿಸಲಾಗಿತ್ತು.
ಈ ತರಬೇತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನೀರುಗಂಟಿಯವರೆಲ್ಲ ಸೇರಿ ಒಟ್ಟು 14 ಮಂದಿ ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಯವರು ಹಾಜರಿದ್ದರು.
ಈ ತರಬೇತಿಯನ್ನು ಅನುಷ್ಠಾನ ಬೆಂಬಲ ಸಂಸ್ಥೆಯ ಗ್ರಾಮ್ಸ್ ಸಂಸ್ಥೆಯ ಜಲಜೀವನ್ ಮಿಷನ್ ಬೆಳ್ತಂಗಡಿ ತಾಲೂಕಿನ ಸಿಬ್ಬಂದಿಯಾವರಾದ ಶ್ರೀಮತಿ ಪುಷ್ಪಲತಾರವರು ಪ್ರಾತಿಕ್ಷೆಯ ಮುಲಕ ತರಬೇತಿಯನ್ನು ನೀಡಿದರು.