



ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮರಳುಗಾರಿಕೆಗೆ ಉಪಯೋಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ಬಗೆಗಿನ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ನೇತ್ರಾವತಿ ಸ್ನಾನಘಟ್ಟದ ಸಮೀಪ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ದಾಳಿ ನಡೆಸಲಾಗಿದ್ದು ಸ್ಥಳದಿಂದ ಮರಳು ತುಂಬಿದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.








