ವೇಣೂರು: ಕುಕ್ಕೇಡಿ ಗ್ರಾಮದ ಬುಳೆಕ್ಕಾರ ಸರಕಾರಿ ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭವು ಡಿ.10ರಂದು ಜರುಗಿತು.
ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಾಜಿ ನಿರ್ದೇಶಕ ಬಿ. ನಿರಂಜನ ಬಾವಂತಬೆಟ್ಟು ಅವರು ಸಮಾರಂಭವನ್ನು ಉದ್ಘಾಟಿಸಿ, ಶಾಲೆಯ ವಾರ್ಷಿಕೋತ್ಸವಗಳು ಮಕ್ಕಳಿಗೆ ಹಬ್ಬವಿದ್ದಂತೆ. ಶಿಕ್ಷಣದ ಜೊತೆ ಪಠ್ಯೇತರ ಚಟುವಟಿಕೆಗಳು ಶಾಲೆಯಲ್ಲಿ ನಿರಂತರ ನಡೆಯಬೇಕು. ಇದು ಮಕ್ಕಳ ಬೌದ್ದಿಕ ಬೆಳವಣಿಗೆಗೆ ಸಹಕಾರಿ ಆಗಲಿದೆ ಎಂದರು. ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷ ಜನಾರ್ಧನ ಪೂಜಾರಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕುಕ್ಕೇಡಿ ಗ್ರಾ.ಪಂ. ಸದಸ್ಯರಾದ ಧನಂಜಯ ಕುಲಾಲ್, ಗೋಪಾಲ ಶೆಟ್ಟಿ, ಕುಸುಮಾ, ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶಂಭುಶಂಕರ್, ಸಿಆರ್‌ಪಿ ಆರತಿ, ಕುವೆಟ್ಟು ಹಿ.ಪ್ರಾ. ಶಾಲೆಯ ಮುಖ್ಯಶಿಕ್ಷಕ ಭಾಸ್ಕರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ರಾಜೇಶ್ ನೆಲ್ಯಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಮ್ ಶೆಟ್ಟಿ, ಕಾರ್ಯದರ್ಶಿ ವಿಜಿತ್, ಪುಂಜಾಲಕಟ್ಟೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಜಯರಾಮ್, ಎಸ್‌ಕೆಡಿಆರ್‌ಡಿಪಿ ಸೇವಾಪ್ರತಿನಿಧಿ ಸುರೇಶ್ ಶೆಟ್ಟಿ, ಬುಳೆಕ್ಕಾರ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕೂಸಪ್ಪ ಮೂಲ್ಯ, ವಿದ್ಯಾರ್ಥಿ ಸಂಘದ ನಾಯಕಿ ಅಮೂಲ್ಯ, ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನಿರ್ಮಿಸಲಾದ ಶಾಲೆಯ ಮುಖ್ಯಧ್ವಾರದ ಉದ್ಘಾಟನೆಯನ್ನು ವಿಜಯ ಬ್ಯಾಂಕಿನ ನಿವೃತ್ತ ಡೆಪ್ಯುಟಿ ಜನರಲ್ ಮೆನೇಜರ್ ವಸಂತ ಪೇರ್ಡೆ ನೆರವೇರಿಸಿದರು. ಶಿಕ್ಷಣ ಮತ್ತು ವಿವಿಧ ಆಟೋಟಗಳ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ದಾನಿಗಳನ್ನು ಗೌರವಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಸತೀಶ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕಿ ಆಶಾ ನಿರೂಪಿಸಿದರು.