ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರಿಗೆ ಕ್ರೀಡಾಕೂಟ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಡಿ.10 ರಂದು ಪೋಷಕರಿಗೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳನ್ನು ನಡೆಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿದ್ದರು.

ಶಾಲಾ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷರಾದ ಬೊನವೆಂಚರ್ ಪಿಂಟೋ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಕ್ರೀಡಾಕೂಟಕ್ಕೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶರತ್ ಪಿಂಟೋ ಮತ್ತು ತೀರ್ಪುಗಾರರಾದ ಹರ್ಷ ಸಹಕರಿಸಿದರು.

LEAVE A REPLY

Please enter your comment!
Please enter your name here