Site icon Suddi Belthangady

ಸಿಯೋನ್ ಆಶ್ರಮ : ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ


ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲಿನಲ್ಲಿ ಡಿ.11 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಸಿರಾಸ್, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ, ಡಾ.ಪ್ರಕೃತಿ ಶೆಟ್ಟಿ ದಂತವೈದ್ಯರು ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

100ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‌ರವರು, ಟ್ರಸ್ಟಿ ಸದಸ್ಯರಾದ ಮೇರಿ ಯು.ಪಿ.ಯವರು, ವೈದ್ಯರಾದ ಡಾ.ಗೋಪಿಕೃಷ್ಣರವರು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Exit mobile version