ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ; ಎಲ್ಲರ ಕೂಡುವಿಕೆಯಿಂದ ಬ್ರಹ್ಮಕಲಶೋತ್ಸವದ ಯಶಸ್ವಿ ಸಾಧ್ಯ: ಶಾಸಕ ಪೂಂಜ

0

ಅಳದಂಗಡಿ: ಅಳದಂಗಡಿ ಶ್ರೀ ಮಹಾಗಣಪತಿ ದೇವರಿಗೆ ಬ್ರಹ್ಮಕಲಶೋತ್ಸವ ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದ್ದು, ಬ್ರಹ್ಮಕಲಶೋತ್ಸವ ಸಮಿತಿ ರಚನೆಗಾಗಿ ಪೂರ್ವಭಾವಿಯಾಗಿ ಸಾರ್ವಜನಿಕ ಸಭೆ ಡಿ.11 ರಂದು ದೇವಸ್ಥಾನದ ವಠಾರದಲ್ಲಿ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಅಳದಂಗಡಿ ಅರಮನೆಯ ಡಾl ಪದ್ಮಪ್ರಸಾದ ಅಜಿಲ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷ ರಾಗಿ ಸದಾನಂದ ಪೂಜಾರಿ ಉಂಗಿಲಬೈಲು, ಪ್ರಧಾನ ಕಾರ್ಯದರ್ಶಿಗಾಗಿ ಸಂತೋಷ್ ಕಾಪಿನಡ್ಕ, ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಿವಪ್ರಸಾದ ಅಜಿಲ ಅವರು ಆಯ್ಕೆಯಾದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, ಯಾವುದೇ ಜಾತಿ, ಮತ, ಪಕ್ಷ ಬೇಧವಿಲ್ಲದೆ ಶ್ರೀ ಮಹಾಗಣಪತಿಯ ಸೇವೆಯನ್ನು ಮಾಡೋಣ. ಹೊರೆಕಾಣಿಕೆ, ಅನ್ನದಾನ ಸೇವೆಯ ಬಗ್ಗೆ ಹೆಚ್ಚಿನ ಗಮನ ಹರಿಸುವಂತಾಗಬೇಕು ಎಂದರು.

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾl ಪ್ರದೀಪ್ ನಾವೂರು ಬ್ರಹ್ಮಕಲಶೋತ್ಸವವನ್ನು ಯಶಸ್ವಿಯಾಗಿ, ಮಾದರಿಯಾಗಿ ಹೇಗೆ ನೆರವೇರಿಸಬಹುದು, ನಮ್ಮೆಲ್ಲರ ನಡವಳಿಕೆ ಹೇಗಿರಬೇಕು ಎಂಬುದನ್ನು ಪ್ರವಚನದ ಮೂಲಕ‌‌ ವಿವರಿಸಿದರು.

ವೇದಿಕೆಯಲ್ಲಿ ಪ್ರಧಾನ ಅರ್ಚಕ ಸೋಮನಾಥ ಮಯ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾl ಶಶಿಧರ ಡೋಂಗ್ರೆ, ಎಸ್.ಕೆ.ಡಿ.ಆರ್.ಡಿ.ಪಿ. ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ್ ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಂಗಾಧರ ಸ್ವಾಗತಿಸಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ನೊಚ್ಚ ವಂದಿಸಿದರು. ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರ್ವಹಿಸಿದರು.

p>

LEAVE A REPLY

Please enter your comment!
Please enter your name here