ಬೆಳ್ತಂಗಡಿ: ತಾಲೂಕು ಪಂಚಾಯತ್ ಬೆಳ್ತಂಗಡಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರನ್ನು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ತಾಲೂಕು ಸಮಿತಿ ಭೇಟಿ ಮಾಡಿ ಬೆಳಗಾವಿಯಲ್ಲಿ ನಡೆಯುವ ಗ್ರಾಮ ಪಂಚಾಯತ್ ನೌಕರರ ಬೃಹತ್ ಹೋರಾಟಕ್ಕೆ ಬೆಂಬಲ ನೀಡುವಂತೆ ಕೋರಲಾಯಿತು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಅವರು ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಲೆಕ್ಕಾಧಿಕಾರಿ ಗಣೇಶ್ , ಮ್ಯಾನೇಜರ್ ಪ್ರಶಾಂತ್,ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯಧ್ಯಕ್ಷರಾದ ಡಾ. ದೇವಿ ಪ್ರಸಾದ್ ಬೊಳ್ಮ ಹಾಗೂ ತಾಲೂಕು ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಭಾಗವಹಿಸಿದ್ದರು.
p>