ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಬಹುಮಾನ

0

ಧರ್ಮಸ್ಥಳ : ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಡಿ.14 ರಂದು ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಎಸ್.ಡಿ.ಎಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಒಟ್ಟು 2 ವಿಭಾಗದಲ್ಲಿ ಪ್ರಶಸ್ತಿಯನ್ನು ಗಳಿಸಿದ್ದಾರೆ. ಇದರಲ್ಲಿ ಭರತನಾಟ್ಯ ಸ್ಪರ್ಧೆಯಲ್ಲಿ 9ನೆ ತರಗತಿಯ ಹಂಸಿನಿ ಭಿಡೆ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಹಾಗೆಯೇ 10ನೆ ತರಗತಿಯ ಸ್ತುತಿ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ ಯವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here