Site icon Suddi Belthangady

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವದ ಸಮಿತಿ ರಚನೆಗಾಗಿ ಪೂರ್ವಭಾವಿ ಸಭೆ

ಅಳದಂಗಡಿ: ಅಳದಂಗಡಿ ಶ್ರೀ ಮಹಾಗಣಪತಿ ದೇವರಿಗೆ ಬ್ರಹ್ಮಕಲಶೋತ್ಸವ ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದ್ದು, ಬ್ರಹ್ಮಕಲಶೋತ್ಸವ ಸಮಿತಿ ರಚನೆಗಾಗಿ ಪೂರ್ವಭಾವಿ ,ಸಾರ್ವಜನಿಕ ಸಭೆ ಡಿ.11 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲ, ಅಧ್ಯಕ್ಷರಾಗಿ ಶಾಸಕರಾದ ಹರೀಶ್ ಪೂಂಜ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಾಧ್ಯಕ್ಷರಾಗಿ ಅಳದಂಗಡಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಪ್ರಧಾನ ಕಾರ್ಯದರ್ಶಿಯಾಗಿ ಯುವ ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ, ಸ್ವಾಗತ ಸಮಿತಿ ಅಧ್ಯಕ್ಷರಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ಅವರು ಆಯ್ಕೆಯಾದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರ್, ಪ್ರಧಾನ ಅರ್ಚಕ ಸೋಮನಾಥ ಮಯ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಶಶಿಧರ ಡೋಂಗ್ರೆ, ಎಸ್.ಕೆ.ಡಿ.ಆರ್.ಡಿ.ಪಿ. ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ ಎಸ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Exit mobile version