ಮಡಂತ್ಯಾರು: ಗ್ರಾಮ ಪಂಚಾಯತ್ ಮಡಂತ್ಯಾರು ಆಯೋಜನೆಯಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಹಾಲು ಉತ್ಪಾದಕರ ಸಹಕಾರಿ ಸಂಘ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಮಡಂತ್ಯಾರು ಇದರ ಸಂಯುಕ್ತ ಆಶಯದಲ್ಲಿ, ರೋಟರಿ ಕ್ಲಬ್ ಮತ್ತು ಜೆಸಿಐ ಮಡಂತ್ಯಾರು ಸಹಕಾರದಲ್ಲಿ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮಗಂಟು ರೋಗದ ವಿರುದ್ಧ ಲಸಿಕ ಅಭಿಯಾನ ಹಾಗೂ ಮಾಹಿತಿ ಶಿಬಿರ ಡಿ.16 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷರಾದ ಶಶಿಪ್ರಭಾ ಇವರ ದಿವ್ಯ ಹಸ್ತದಿಂದ ಉದ್ಘಾಟನೆಗೊಂಡಿತು.
ಮುಖ್ಯ ಅತಿಥಿಗಳಾಗಿ ಪಶು ವೈದ್ಯಾಧಿಕಾರಿ ಡಾ. ವಿನಯ್ ಇವರು ಲಸಿಕಾ ಅಭಿಯಾನದ ಮಾಹಿತಿಯನ್ನು ವಿವರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ, ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಅರವಿಂದ್ ಕೆ. ಜೈನ್, ಜೆಸಿಐ ಮಡಂತ್ಯಾರು ಇದರ ಅಧ್ಯಕ್ಷರಾದ ಜೇಸಿ ಭರತ್ ಶೆಟ್ಟಿ, ರೋಟರಿ ಕ್ಲಬ್ ಮಡಂತ್ಯಾರಿನ ಅಧ್ಯಕ್ಷರಾದ ರೊ/ ರೋನಾಲ್ಟ್ ಸಿಕ್ವೆರಾ, ಮಡಂತ್ಯಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪುರುಷೋತ್ತಮ್ ಜಿ. ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಜಿ ಬಾಲಕೃಷ್ಣ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿನ ಸದಸ್ಯರಾದ ಕಿಶೋರ್ ಕುಮಾರ್ ಶೆಟ್ಟಿ ಮೂಡಯೂರು, ವಿಶ್ವನಾಥ ಪೂಜಾರಿ ಹಾರಬೆ, ಹರಿಪ್ರಸಾದ್ ಪದೆಂಜಿಲ ಹಾಗೂ ಮಡಂತ್ಯಾರ್ ಹಾಲು ಸಹಕಾರಿ ಸಂಘದ ಉಪಾಧ್ಯಕ್ಷರಾದ ಅಶೋಕ್ ಕೆ. ಎಸ್. ನಿರ್ದೇಶಕರಾದ ಶ್ರೀ ಪ್ರವೀಣ್ ಚಂದ್ರ ಶೆಟ್ಟಿ, ಶ್ರೀ ವೆಂಕಪ್ಪ ಪೂಜಾರಿ ಕೋಡ್ಲಕ್ಕೆ ಮತ್ತಿತರರು ಉಪಸ್ಥಿತರಿದ್ದರು. ಈ ಅಭಿಯಾನವು ಎರಡು ದಿನಗಳ ಕಾಲ ನಡೆಯಲಿದ್ದು ಡಿ.16 ರಂದು ಪಾರೆಂಕಿ ಗ್ರಾಮ ವ್ಯಾಪ್ತಿಯಲ್ಲಿ ಹಾಗೂ ಡಿ.17 ರಂದು ಕುಕ್ಕಳ ಗ್ರಾಮ ವ್ಯಾಪ್ತಿಯಲ್ಲಿ ಪ್ರತಿ ಮನೆಮನೆಗಳಿಗೆ ತೆರಲಿ ಈ ಲಸಿಕಾ ಅಭಿಯಾನವನ್ನು ನಡೆಸಲಾಗುತ್ತದೆ.