ನಾಳ : ಇಲ್ಲಿಯ ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ,ಸಾಂಸ್ಕೃತಿಕ ಕಾರ್ಯಕ್ರಮ ಡಿ.14 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಅಧ್ಯಕ್ಷ, ಹಳೆ ವಿಧ್ಯಾರ್ಥಿ, ಪ್ರಸಾದ್ ಕೆ.ಎಸ್. ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಗೌಡ ಕೆ. ಸಭಾ ಅಧ್ಯಕ್ಷತೆ ವಹಿಸಿ ಕಳಿಯ ಗ್ರಾಮ ಪಂಚಾಯತ್ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡುತ್ತಾ ಕಳಿಯ ಗ್ರಾಮ ಪಂಚಾಯತು ವತಿಯಿಂದ ಹಾಗೂ ಶಾಸಕರ ನಿಧಿಯಿಂದ ಶಾಲೆಯ ವಿವಿಧ ಅಭಿವೃದ್ಧಿಗೆ ಸುಮಾರು 15 ಲಕ್ಷಕ್ಕೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ.ಮತ್ತು ಈ ಭಾಗದ ರಸ್ತೆಗಳ ಅಭಿವೃದ್ಧಿಗೆ ಪ್ರಯತ್ನಿಸುವುದಾಗಿ ತಿಳಿಸಿದರು.
ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಹಳೆ ವಿಧ್ಯಾರ್ಥಿಯಾಗಿದ್ದ ಸಮಯದಲ್ಲಿನ ನೆನಪುಗಳನ್ನು ಮೆಲುಕು ಹಾಕಿದರು. ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ವಿಜಯ ಕುಮಾರ್ ಕೆ,ಮಾತನಾಡುತ್ತಾ ವಾರ್ಷಿಕೋತ್ಸವಕ್ಕೆ ಸಹಕರಿಸಿ ವಿಧ್ಯಾಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ,ಮುಂದಿನ ದಿನಗಳಲ್ಲಿಯೂ ಸಹಕರಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರಸ್ತುತ ಕಳಿಯ ಗ್ರಾಮ ಪಂಚಾಯತ್ ಸದಸ್ಯ ಸುಧಾಕರ ಮಜಲು, ಲತೀಫ್ ಪರಿಮ, ಮೋಹಿನಿ ಬಿ ಗೌಡ, ಪುಷ್ಪ ನಾಳ, ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್ ಪಾಟೀಲ್, ವಾರ್ಷಿಕೋತ್ಸವ ಸಮಿತಿ ಉಪಾಧ್ಯಕ್ಷ ಕೇಶವ ಪೂಜಾರಿ ನಾಳ,ಬೆಳ್ತಂಗಡಿ ಶಿಕ್ಷಣ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶಂಭು ಶಂಕರ್,ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ಗುರುವಾಯನಕೆರೆ ರಬ್ಬರ್ ಬೆಳೆಗಾರರ ಸಹಕಾರಿ ಸಂಘದ ಪ್ರಬಂಧಕ ಅಶೋಕ್ ಆಚಾರ್ಯ ನಾಳ, ಉಪ್ಪಿನಂಗಡಿ ಸಿಟಿ ಹೋಟೆಲ್ ಮಾಲಕ ಅಬ್ದುಲ್ ರಹಿಮಾನ್, ಜಾರಿಗೆಬೈಲು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಮಹಮ್ಮದ್ ರಫೀಕ್ ಮುಸ್ಲಿಯಾರ್, ನ್ಯಾಯತರ್ಪು ಸೇವಾ ಪ್ರತಿನಿಧಿ ವಿನೋದ, ನಾಳ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮೋಹನ ಗೌಡ ತಾರೆಮಾರು, ಉಪಾಧ್ಯಕ್ಷೆ ಮಮತ ಆಳ್ವ ನಾಳ, ಮುಖ್ಯ ಶಿಕ್ಷಕ ಪಿಲಿಪ್ ರೊನಾಲ್ಡ್ ಡಿಮೆಲ್ಲೊ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ರವಿಕಿರಣ್, ವಿಧ್ಯಾರ್ಥಿ ನಾಯಕಿ ಕು| ಶ್ರೀಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿ ಹಾಗೂ ಹಳೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು.
ಶಾಲಾ ವಾರ್ಷಿಕೋತ್ಸವ ಸಮಿತಿ, ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ, ವಿವಿಧ ಸಮಿತಿ ಪದಾಧಿಕಾರಿಗಳು, ಶಿಕ್ಷಕರು, ಮಕ್ಕಳ ಪೋಷಕರು, ವಿಧ್ಯಾಭಿಮಾನಿಗಳು,ವಿಧ್ಯಾರ್ಥಿಗಳು ವಾರ್ಷಿಕೋತ್ಸವದಲ್ಲಿ ಬಾಗವಹಿಸಿದರು. ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ ಸ್ವಾಗತಿಸಿ,ಸಹ ಶಿಕ್ಷಕಿ ದಮಯಂತಿ ಎಂ,ಕಾರ್ಯಕ್ರಮ ನಿರೂಪಿಸಿ,ಸಿಸಿಲಿಯಾ ಫ್ಲಾವಿಯಾ ಡಿಕೋಸ್ತ ಧನ್ಯವಾದವಿತ್ತರು.
ಗುರುವಾಯನಕೆರೆ ವಲಯ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್ ಕೆ ಯವರನ್ನು ವೇದಿಕೆಯಲ್ಲಿ ಸನ್ಮಾನಿಸಿ, ಗೌರವಿಸಿದರು.