ಮಲವಂತಿಗೆ: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಜೆಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಡಿ.17ರಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಉದ್ದೇಶಿಸಿರುತ್ತಾರೆ, ಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.