Site icon Suddi Belthangady

ನಿವೃತ್ತ ಪ್ರಾಧ್ಯಾಪಕ ಕೃಷ್ಣಪ್ಪ ಕೋಟ್ಯಾನ್ ನಿಧನ

ಸುಲ್ಕೇರಿ: ಗ್ರಾಮದ ಸಿರಿಮಂಗಳ ನಿವಾಸಿ, ನಿವೃತ್ತ ಪ್ರಾಧ್ಯಾಪಕ ಕೃಷ್ಣಪ್ಪ ಕೋಟ್ಯಾನ್ (83ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಇವರು ಗುರುವಾಯನಕೆರೆ,ಅಳದಂಗಡಿ,ಬೆಳ್ತಂಗಡಿ ಪ್ರೌಢಶಾಲೆ ಸೇರಿದಂತೆ ಹಲವು ಶಾಲೆಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಡಿ. 17 ರಂದು ಬೆಳಿಗ್ಗೆ ನಡೆಯಲಿದೆ ಎಂದು ಕುಟುಂಬ ಮೂಲದಿಂದ ತಿಳಿದು ಬಂದಿದೆ.

Exit mobile version