ಧರ್ಮಸ್ಥಳ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ದ.ಕ ಜಿಲ್ಲೆ ಮಂಗಳೂರು ಸಹಯೋಗದೊಂದಿಗೆ, ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರದ ಧರ್ಮಸ್ಥಳದ ರೂಂ.4.85 ಕೋಟಿ ವೆಚ್ಚದ ಸ್ನಾನಘಟ್ಟ ಅಭಿವೃದ್ದಿ ಕಾಮಗಾರಿಯ ಉದ್ಘಾಟನಾ ಕಾರ್ಯಕ್ರಮ ಡಿ.17 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಸ್ನಾನಘಟ್ಟದಲ್ಲಿ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸಂಸದರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯ ಸಾನಿಧ್ಯದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ನಾಮಫಲಕ ಅನಾವರಣಗೊಳಿಸಿದರು. ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷ ಜಯ ಮೋನಪ್ಪ ಗೌಡ, ದ.ಕ ಜಿಲ್ಲಾ ಭಾ.ಆ.ಸೇ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ವೃತ್ತ ಇಂಜಿನಿಯರ್ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಗಣೇಶ್ ಎಸ್, ಕ.ಆ.ಸೇ ಉಪ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ ಮಂಗಳೂರಿನ ಎನ್ ಮಾಣಿಕ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ್ ಕುಮಾರ್ ಎಸ್ ಉಪಸ್ಥಿತರಿದ್ದರು.
ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಪ್ರಸಾದ್ ಅಜಿಲ ಸ್ವಾಗತಿಸಿದರು. ಅಜಿತ್ ಕುಮಾರ್ ನಿರೂಪಿಸಿದರು.