ಮಲವಂತಿಗೆ: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಜೆಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ಡಾ| ರವಿಕುಮಾರ್ ಅವರು ಡಿ.17ರಂದು ಜಿಲ್ಲಾ ಮಟ್ಟದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಪುತ್ತೂರು ಸಹಾಯಕ ಆಯುಕ್ತರು ಗಿರೀಶ್ ನಂದನ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಹಿಂದೆ ತಾಲೂಕಿನ ಶಿಶಿಲ ಗ್ರಾಮದಲ್ಲಿ ದ.ಕ ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಅವರು ಮೊದಲ ಗ್ರಾಮ ವಾಸ್ತವ್ಯ ಹೂಡಿದ್ದರು. ಇದೀಗ ತಾಲೂಕಿನಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ 2ನೇ ಗ್ರಾಮ ವಾಸ್ತವ್ಯ ಇದಾಗಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಿಂದ ವಿವಿಧ ಮಾಸಾಶನವನ್ನು ವಿತರಿಸಲಾಯಿತು. ಸಾರ್ವಜನಿಕರ ತೊಂದರೆಗಳಿಗೆ ಸ್ಥಳದಲ್ಲೇ ಪರಿಹಾರವನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಕಿಶೋರ್ ಕುಮಾರ್, ಕಾರ್ಕಳ ವನ್ಯಜೀವಿ ವಿಭಾಗದ ಎಸಿಎಫ್ ಕಾಜೋರ್, ಪುತ್ತೂರು ಅರಣ್ಯ ಇಲಾಖೆಯ ಎಸಿಎಫ್ ಸುಬ್ರಹ್ಮಣ್ಯ, ಹಿಂದುಳಿದ ವರ್ಗಗಳ ಉಪನಿರ್ದೇಶಕಿ ರಶ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ದಲಿಂಗೇಶ್ವರ ಬೇವಿನ ಮಠ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸ್ವಾಗತಿಸಿದರು.