ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮಂಗಳೂರು ಹಾಗೂ ಕಂದಾಯ ಇಲಾಖೆ ಬೆಳ್ತಂಗಡಿ ಇದರ ಜಂಟಿ ಸಹಯೋಗದೊಂದಿಗೆ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಹಾಗೂ 94ಸಿ/94ಸಿಸಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಡಿ.20ರಂದು ಬೆಳ್ತಂಗಡಿ ಮಂಜುನಾಥ ಕಲಾಭವನದಲ್ಲಿ ನಡೆಯಿತು.
10 ಅರ್ಹ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಹಾಗೂ 200 ಮಂದಿ ಫಲಾನುಭವಿಗಳಿಗೆ 94ಸಿ/94ಸಿಸಿ ಹಕ್ಕು ಪತ್ರವನ್ನು , ನಡವಳಿಯನ್ನು ಶಾಸಕ ಹರೀಶ್ ಪೂಂಜ ವಿತರಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಕಲ್ಮಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್, ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷ ಯೋಗಿಶ್, ಅರಸಿನಮಕ್ಕಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಬೆನೆಡಿಕ್ಟ್ ಸಲ್ದಾನ, ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಕಿ, ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಹಡೀಲು, ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ, ನಡ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಗೌಡ, ಚಾರ್ಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಸಾದ್ ಕೆ., ನೆರಿಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಉಪಸ್ಥಿತರಿದ್ದರು.