ಬೆಳಗಾವಿಯಲ್ಲಿ ನಡೆಯುತ್ತಿದ್ದ ಗ್ರಾಪಂ ನೌಕರರ ಪ್ರತಿಭಟನೆಗೆ ತೆರೆ: ಮನವಿ ಸ್ವೀಕರಿಸಿದ ಸಚಿವ ಗೋವಿಂದ ಕಾರಜೋಳ, ಬೇಡಿಕೆ ಈಡೇರಿಸುವ ಭರವಸೆ

0


ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಶ್ರೇಯೋಭಿವೃದ್ಧಿ ಸಂಘದ ಆಶ್ರಯದಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದ ಎದುರು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಪಡೆದುಕೊಂಡಿದ್ದಾರೆ. ದಿ.19 ರಂದು ಸಂಜೆ ಹಿಂದಕ್ಕೆ ಪಡೆದುಕೊಂಡಿದ್ದಾರೆ . ಗ್ರಾಪಂ ನೌಕರರ ಹೋರಾಟದಲ್ಲಿ ಗ್ರಾಮ ಪಂಚಾಯತ್ ನೌಕರರ ಅಹವಾಲು ಸ್ವೀಕರಿಸಲು ಮುಖ್ಯ ಮಂತ್ರಿಗಳ ಪರವಾಗಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಯವರ ಸೂಚನೆಯಂತೆ ಪ್ರಮುಖ ಮತ್ತು ಮಧ್ಯಮ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ರವರು ಆಗಮಿಸಿ ಮನವಿಯಲ್ಲಿ ನೀಡಲಾದ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸರಕಾರದ ಪರವಾಗಿ ಆಶ್ವಾಸನೆಯನ್ನು ನೀಡಿದ ಹಿನ್ನೆಲೆಯ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ.

ಗ್ರಾಪಂ ನೌಕರರ ಹೋರಾಟದಲ್ಲಿ ಗ್ರಾಮ ಪಂಚಾಯತ್ ನೌಕರರ ಅಹವಾಲು ಸ್ವೀಕರಿಸಲು ಮುಖ್ಯ ಮಂತ್ರಿಗಳ ಪರವಾಗಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಯವರ ಸೂಚನೆಯಂತೆ ಪ್ರಮುಖ ಮತ್ತು ಮಧ್ಯಮ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ರವರು ಆಗಮಿಸಿ ಮನವಿಯಲ್ಲಿ ನೀಡಲಾದ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸರಕಾರದ ಪರವಾಗಿ ಆಶ್ವಾಸನೆಯನ್ನು ನೀಡಿದ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ. ಹಿನ್ನೆಲೆಯಲ್ಲಿ ಪ್ರತಿಭಟನಾ ಸ್ಥಳಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ರವರ ಸೂಚನೆಯಂತೆ ವಿಪಕ್ಷದ ಉಪ ನಾಯಕ ಯು ಟಿ ಖಾದರ್ ರವರು ಆಗಮಿಸಿ ಗ್ರಾಮ ಪಂಚಾಯತ್ ನೌಕರರ ಬೇಡಿಕೆಗಳ ಕುರಿತು ಅಧಿವೇಶನದಲ್ಲಿ ಚರ್ಚೆಗೆ ಹಾಕಿ ಈಡೇರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಆಶ್ವಾಸನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಬೊಳ್ಳರವರು ಸರಕಾರದ ಮತ್ತು ವಿರೋದ ಪಕ್ಷದಿಂದ ಪ್ರಥಮ ಆಶ್ವಾಸನೆಯನ್ನು ಸ್ವೀಕರಿಸುವ ಮೂಲಕ ತಾತ್ಕಲಿಕವಾಗಿ ಹೋರಾಟವನ್ನು ಕೈಬಿಡುವುದಾಗಿ ಮತ್ತು ಒಂದು ವೇಳೆ ಸರಕಾರದಿಂದ ಗ್ರಾಮ ಪಂಚಾಯತ್ ನೌಕರರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದನೆ ಸಿಗದೇ ಇದ್ದರೆ, ಬೆಂಗಳೂರಿನಲ್ಲಿ ರಾಜ್ಯದ 6000 ಕ್ಕೂ ಅಧಿಕ ಗ್ರಾಮ ಪಂಚಾಯತಿಗಳ ಎಲ್ಲಾ 65000ಕ್ಕೂ ಅಧಿಕ ಪಂಚಾಯತ್‌ ನೌಕರರನ್ನು ಸೇರಿಸಿ ಹೋರಾಟವನ್ನು ಕೈಗೊಳ್ಳುದಾಗಿ ಘೋಷಣೆ ಮಾಡಿದರು .
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತ್ ನೌಕರರಾದ ಬಿಲ್ ಕಲೇಕ್ಟರ್, ಕ್ಲರ್ಕ್ ಕಮ್ ಡಿಇಓ, ಡಾಟ ಎಂಟ್ರಿ ಅಪರೇಟರ್, ವಾಟರ್ ಮ್ಯಾನ್, ಪಂಪುಚಾಲಕ, ಶುಚಿತ್ವ ನೌಕರರು ಹಾಗೂ ಅಟೆಂಡರ್ ಗಳು ಭವಿಷ್ಯ ನಿಧಿ ಇಲ್ಲದೇ, ಆರೋಗ್ಯ ಭದ್ರತೆ ಇಲ್ಲದೇ, ಸರಿಯಾದ ವೇತನ ಶ್ರೇಣಿ ಇಲ್ಲದೇ, ಉದ್ಯೋಗ ಭದ್ರತೆ ಇಲ್ಲೆದೇ, ನಿವೃತ್ತಿ ಜೀವನಕ್ಕೆ ಭದ್ರತೆ ಇಲ್ಲದೇ ಕಳೆದ ಮೂರು ದಶಕಗಳಿಂದ ಕೇವಲ ಕನಿಷ್ಠ ಕೂಲಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ ನೇತೃತ್ವದಲ್ಲಿ ಬೆಳಗಾವಿ ವಿಧಾನಸೌಧದ ಮುಂಭಾಗ ಗ್ರಾಮ ಪಂಚಾಯಿತಿ ನೌಕರರ ಸಿ ಮತ್ತು ಡಿ ದರ್ಜೆ ಸ್ಥಾನಕ್ಕಾಗಿ ರಾಜ್ಯಮಟ್ಟದ ಬೃಹತ್ ಹೋರಾಟ ಸುಮಾರು 15 ಸಾವಿರ ನೌಕರರು ಭಾಗಿಯಾಗಿದ್ದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತ್ ನೌಕರರಿಗೆ ಸೂಕ್ತ ಸ್ಥಾನಮಾನ ಮತ್ತು ಸವಲತ್ತುಗಳನ್ನು ನೀಡದೇ ಕೇವಲ ಕನಿಷ್ಠ ವೇತನ ನೀಡಿ ಜೀತದಾಳುಗಳಂತೆ ಹಗಲಿರುಳು ದುಡಿಸಿಕೊಳ್ಳುತ್ತಿದ್ದು, ಗ್ರಾಮೀಣ ಭಾಗದಲ್ಲಿನ ರಾಜಕೀಯ ಒತ್ತಡ, ಮೇಲಾಧಿಕಾರಿಗಳ ಒತ್ತಡದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತ್ ಬಹು ಮುಖ್ಯ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪಂಚಾಯತ್ ನೌಕರರೇ ಸೇರಿ ದ.19 ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಸಿದ್ದೇವೆ ಎಂದು ದೇವಿಪ್ರಸಾದ್ ಬೋಲ್ಮ ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here