ಉಜಿರೆ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ ಹಾಗೂ ರತ್ನಮಾನಸ ನಿಲಯದ “ವಾರ್ಷಿಕ ಪ್ರತಿಭಾ ದಿನಾಚರಣೆ ಡಿ.15 ರಂದು ನಡೆಯಿತು.
ಅತಿಥಿಗಳಾಗಿ ಆಗಮಿಸಿದ ಶ್ರೀ. ಧ. ಮ0. ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹರೀಶ್ ಕುಮಾರ್ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಗ ಸೋಮಶೇಖರ್ ಬಿ. ಶೆಟ್ಟಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದರು.
ಶ್ರೀಧ.ಮ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು . ವಿದ್ಯಾರ್ಥಿಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಸಹ ಶಿಕ್ಷಕ ರಮೇಶ್ ಮಯ್ಯರವರು ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು. ವಿವಿಧ ಶಾಲೆಯ ಮುಖ್ಯೋಪಾಧ್ಯಾಯರುಗಳು, ಈ ಶಾಲೆಯ ಹಳೆ ವಿದ್ಯಾರ್ಥಿಗಳು, ಮಾಜಿ ಶಿಕ್ಷಕರು ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಪದ್ಮರಾಜ್ ವಂದಿಸಿದರು ವಿದ್ಯಾರ್ಥಿಗಳು ಪ್ರಾರ್ಥಿಸಿದರು,ವಿದ್ಯಾರ್ಥಿಗಳಾದ ಸ್ವಪ್ನ ಮತ್ತು ವಸುಧಾ ಕಾರ್ಯಕ್ರಮ ನಿರೂಪಿಸಿದರು.