ಕಡಿರುದ್ಯಾವರ: ಕಡಿರುದ್ಯಾವರ ಗ್ರಾ.ಪಂ ಆಶ್ರಯದಲ್ಲಿ , ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಬಂಗಾಡಿ, ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್ ಬೆಳ್ತಂಗಡಿ ಇದರ ಸಹಭಾಗಿತ್ವದೊಂದಿಗೆ ಅಡಿಕೆ ಎಲೆಚುಕ್ಕೆ ರೋಗ ನಿವಾರಣಾ ಮಾಹಿತಿ ಶಿಬಿರವು ಡಿ.21ರಂದು ಮಠ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಿರುದ್ಯಾವರ ಗ್ರಾ.ಪಂ ಅಧ್ಯಕ್ಷ ಅಶೋಕ್ ಕುಮಾರ್ ಮಠ ವಹಿಸಿದ್ದರು. ಉದ್ಘಾಟನೆಯನ್ನು ಬಂಗಾಡಿ ಸಹಕಾರಿ ಸಂಘದ ಅದ್ಯಕ್ಷ ಹರೀಶ್ ಸಾಲಿಯಾನ್ ಮತ್ತು ಮಠ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವಳಂಬ್ರ ಕಿಶೋರ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಅತಿಥಿಯಾಗಿ ಹಿರಿಯ ಸಹಾಯಕ ತೋಟಗಾರಿಕಾ ಅಧಿಕಾರಿ ಚಂದ್ರಶೇಖರ್ ಭಾಗವಹಿಸಿ ಎಲೆಚುಕ್ಕೆ ರೋಗದ ಬಗ್ಗೆ ಹಾಗೂ ಅಡಿಕೆ ಮರಗಳಿಗೆ ಗೊಬ್ಬರ ಮತ್ತು ನೀರು ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಬಂಗಾಡಿ ಸಿ.ಎ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಶೆಟ್ಟಿಗಾರ , ತೋಟಗಾರಿಕಾ ಇಲಾಖೆ ನಿರ್ದೇಶಕ ಮಹಾವೀರ, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು. ಬಹು ಸಂಖ್ಯೆಯಲ್ಲಿ ರೈತರು ಭಾಗಿಯಾಗಿ ಪ್ರಯೋಜನವನ್ನು ಪಡೆದುಕೊಂಡರು.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಜಯಕೀರ್ತಿ ಸ್ವಾಗತಿಸಿ , ನಿರೂಪಿಸಿ, ವಂದಿಸಿದರು.