Site icon Suddi Belthangady

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಹಾಗೂ ರತ್ನಮಾನಸ ನಿಲಯದ “ವಾರ್ಷಿಕ ಪ್ರತಿಭಾ ದಿನಾಚರಣೆ”

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಹಾಗೂ ರತ್ನಮಾನಸ ನಿಲಯದ “ವಾರ್ಷಿಕ ಪ್ರತಿಭಾ ದಿನಾಚರಣೆ”ಯು ಡಿ.15ರಂದು ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾಯಿತು.
ಅತಿಥಿಗಳಾಗಿ ಆಗಮಿಸಿದ ಶ್ರೀ. ಧ. ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಸತೀಶ್ ಚಂದ್ರರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯನಿರ್ವಹಣಾಧಿಕಾರಿಯಾದ ಹರೀಶ್ ಕುಮಾರ್ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಗಳಾದ ಸೋಮಶೇಖರ್ ಬಿ. ಶೆಟ್ಟಿ ರವರು ಉಪಸ್ಥಿತರಿದ್ದರು.

ಶ್ರೀ ಧ.ಮ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಅವರು ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.

ವಿದ್ಯಾರ್ಥಿಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.

ಸಹ ಶಿಕ್ಷಕರಾದ ಶ್ರೀಯುತ ರಮೇಶ್ ಮಯ್ಯರವರು ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು.

ವಿವಿಧ ಶಾಲೆಯ ಮುಖ್ಯೋಪಾಧ್ಯಾಯರುಗಳು, ಈ ಶಾಲೆಯ ಹಳೆ ವಿದ್ಯಾರ್ಥಿಗಳು, ಮಾಜಿ ಶಿಕ್ಷಕರು ಭಾಗವಹಿಸಿದ್ದರು.

ಮುಖ್ಯ ಗುರುಗಳಾದ ಪದ್ಮರಾಜ್ ರವರು ವಂದಾರ್ಪಣೆಗೈದರು. ವಿದ್ಯಾರ್ಥಿಗಳಾದ ಸ್ವಪ್ನ ಮತ್ತು ವಸುಧಾ ಕಾರ್ಯಕ್ರಮ ನಿರೂಪಣೆಗೈದರು.

Exit mobile version