Site icon Suddi Belthangady

ಅಂತರಾಷ್ಟ್ರೀಯ ಜಾಂಬೂರಿ: ವೇಣೂರಿನಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ


ವೇಣೂರು: ಮೂಡಬಿದಿರೆಯ ಆಳ್ವಾಸ್‌ನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಉತ್ಸವದ ಅಂಗವಾಗಿ ವೇಣೂರಿನಲ್ಲಿ ನಮ್ಮ ಸಂಸ್ಕೃತಿ – ಸ್ವಚ್ಛ ಸಂಸ್ಕೃತಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಡಿ.22ರಂದು ಚಾಲನೆ ನೀಡಿದರು.


ಶಾಸಕ ಹರೀಶ್ ಪೂಂಜ ಅವರು ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ, ಪ್ರಧಾನಿ ನರೇಂದ್ರ ಮೋದಿಯವರು ಕರೆಕೊಟ್ಟ ಸ್ವಚ್ಛ ಭಾರತದ ಕನಸು ಇಂದು ವಿಶ್ವಯಾಪಿ ಆಂದೋಲನವಾಗಿ ಪರಿವರ್ತನೆಗೊಂಡಿದೆ. ಅಂತರಾಷ್ಟ್ರೀಯ ಜಾಂಬೂರಿ ಉತ್ಸವದ ಈ ಸ್ವಚ್ಛತಾ ಆಂದೋಲನ ಎಲ್ಲರಿಗೂ ಪ್ರೇರಣದಾಯಕವಾಗಲಿ ಎಂದರು.
500ಕ್ಕೂ ಅಧಿಕ ಮ೦ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಚ್ಛತಾ ಆ೦ದೋಲನದಲ್ಲಿ ಪಾಲ್ಗೊ೦ಡು ವೇಣೂರು ಮಹಾವೀರ ನಗರದ ನಮನ ಪೆಟ್ರೋಲ್ ನಿ೦ದ ಕರಿಮಣೇಲು ವರೆಗೆ ಸ್ವಚ್ಚತಾ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾ.ಪಂ.ನ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ., ಮಡಂತ್ಯಾರು ಸೇಕ್ರಡ್ ಹಾರ್ಟ್ ಚರ್ಚ್‌ನ ಧರ್ಮಗುರು ವಂ|ಫಾ| ಬೇಸಿಲ್‌ವಾಸ್, ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ಉಪಾಧ್ಯಕ್ಷೆ ಪುಷ್ಪಾ, ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ಬಿಜೆಪಿ ಅಲ್ಪಸಂಖ್ಯಾಕ ಮೋರ್ಚಾದ ಅಧ್ಯಕ್ಷ ಅರುಣ್ ಕ್ರಾಸ್ತ, ವೇಣೂರು ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಗಂಗಾಧರ, ಹೊಸಂಗಡಿ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ರಾವ್, ಅಕ್ರಮ-ಸಕ್ರಮ ಸಮಿತಿ ಸದಸ್ಯ ಜಯಂತ ಕೋಟ್ಯಾನ್, ವೇಣೂರು ಗ್ರಾ.ಪಂ. ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವೇಣೂರು ಗ್ರಾ.ಪಂ.ನ ಪಿಡಿಒ ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು.

Exit mobile version