ಉಜಿರೆ ಶ್ರೀ ಧ. ಮ. ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

0

ಉಜಿರೆ :ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ. ಎಸ್. ಉದ್ಘಾಟಿಸಿದರು.

ಪ್ರಾಚಾರ್ಯ ಪ್ರೊ.ದಿನೇಶ ಚೌಟ ಹಾಗೂ ಅಭ್ಯಾಗತರಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕ್ರೀಡಾ ಕಾರ್ಯದರ್ಶಿ ರಮೇಶ್ ಹೆಚ್. ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ದೇಶ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದವರನ್ನು, ಗುಂಪು ಸ್ಪರ್ಧೆಗಳಲ್ಲಿ ಹಾಗೂ ಪಥ ಸಂಚಲನ ಕಾರ್ಯಕ್ರಮದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಮೊದಲು ಎಲ್ಲಾ ತರಗತಿ ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ ಕಾರ್ಯಕ್ರಮ ನಡೆಯಿತು. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳು ಕ್ರೀಡಾಪಥದೊಂದಿಗೆ ಕ್ರೀಡಾಜ್ಯೋತಿ ಬೆಳಗಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here