Site icon Suddi Belthangady

ಬೆಳ್ತಂಗಡಿಯಲ್ಲಿಯಲ್ಲಿ ಕಿಸಾನ್ ಗೋಷ್ಠಿ ಹಾಗೂ ರೈತ ದಿನಾಚರಣೆ 12ಮಂದಿ ಸಾಧಕ ಕೃಷಿಕರಿಗೆ ಸಮ್ಮಾನ

ಬೆಳ್ತಂಗಡಿ: ಆತ್ಮ ಯೋಜನೆ, ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಹಾಗೂ ಜಿಲ್ಲಾ ಕೃಷಿಕ ಸಮಾಜ, ಕೃಷಿ ಇಲಾಖೆ ದ.ಕ ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ಡಿ.23 ರಂದು ಕಿಸಾನ್ ಗೋಷ್ಠಿ ಹಾಗೂ ರೈತ ದಿನಾಚರಣೆ ಕಾರ್ಯಕ್ರಮ ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ‌ ಆವರಣದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಸಂಪತ್ ಸಾಮ್ರಾಜ್ಯ ನೆರವೇರಿಸಿದರು. ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಹಾವೀರ ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿಸಾನಿಕಂ, ಕೃಷಿಕ ಸಮಾಜದ ಪ್ರತಿನಿಧಿ ರಾಜು ಪೂಜಾರಿ ಪಿ.ಕೆ, ಕೃಷಿಕ ಸಮಾಜದ ಉಪಾಧ್ಯಕ್ಷ ಸುರೇಖಾ ಭಂಡಾರಿ, ತಾ.ಪಂ ಕಾಯ೯ನಿವ೯ಹಣಾಧಿಕಾರಿ ಕುಸುಮಾಧರ್, ಕೃಷಿ ಇಲಾಖಾ ಸಹಾಯಕ ಕೃಷಿ ನಿರ್ದೇಶಕ ರಂಜಿತ್, ತೋಟಗಾರಿಕಾ ಇಲಾಖಾ ಸಹಾಯಕ ನಿರ್ದೇಶಕ ಚಂದ್ರಶೇಖರ್, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಂಜ ನಾಯ್ಕ , ಸಮಾಜ‌ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ, ಬಿ.ಸಿ.ಎಂ ಇಲಾಖೆ ಸಹಾಯಕ ನಿರ್ದೇಶಕ ತೋಮಸ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಾಧಕ ಕೃಷಿಕರಿಗೆ ಹಾಗೂ ಪ್ರಶಸ್ತಿ ಪಡೆದ ಕೃಷಿಕರಿಗೆ , ಸಂಪನ್ಮೂಲ ವ್ಯಕ್ತಿಗಳ ಸನ್ಮಾನ ಕಾರ್ಯಕ್ರಮ ನೆರವೇರಿತು. ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸ್ವಾಗತಿಸಿ ನಿರೂಪಿಸಿದರು. ಕೃಷಿಕ ಸಮಾಜದ ಕಾರ್ಯದರ್ಶಿ ಮುನಿರಾಜ ಧನ್ಯವಾದ ಗೈದರು. ಕೃಷಿ ಅಧಿಕಾರಿ ಹುಮೇರ ಜಬೀನ್ ಸೇರಿದಂತೆ ಕೃಷಿ ಇಲಾಖೆಯ ಸಿಬ್ಬಂದಿಗಳು ಸಹಕರಿಸಿದರು.

Exit mobile version