ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

0

.

ಪುಂಜಾಲಕಟ್ಟೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಜತ್ತೋಡಿ – ಬೆರ್ಕಳ ಬೆಳ್ತಂಗಡಿ ತಾಲೂಕು ಇಲ್ಲಿ ನಡೆಯುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಪೂಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿಕಟ ಪೂರ್ವಾಧ್ಯಕ್ಷರು, ವಲಯ ಉಪಾಧ್ಯಕ್ಷರು ಆದ ಜೇಸಿ ಭರತ್ ಶೆಟ್ಟಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, “ಸಮಯ ಮತ್ತು ಆದ್ಯತೆಯ ನಿರ್ವಹಣೆಯ” ಬಗ್ಗೆ ವಿಶೇಷ ಉಪನ್ಯಾಸವನ್ನು ಬಹಳ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದು ಒಳ್ಳೆಯ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ನೂರಕ್ಕೂ ಮಿಕ್ಕಿ ಶಿಬಿರಾಥಿಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಶೀಲಾವತಿ, ಸುಂದರ ಪೂಜಾರಿ, ಸುಜಾತ, ಚೇತನಾ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here