Site icon Suddi Belthangady

ಕೋವಿಡ್ ಮುನ್ನೆಚ್ಚರಿಕೆ- ಮಾರ್ಗಸೂಚಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ


ಬೆಳ್ತಂಗಡಿ : ಕೋವಿಡ್ ರೂಪಾಂತರ ತಳಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಎಮ್. ಆರ್ ತಿಳಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಅವರು ಮಾಲ್ ಕಚೇರಿ, ಸಿನಿಮಾ ಗೃಹ, ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಮತ್ತು ಬಸ್ಟ್ ರೈಲ್, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸೂಚಿಸಿದ್ದಾರೆ. ಆರೋಗ್ಯ ಸಮಸ್ಯೆ ಇರುವ ವೃದ್ಧರು ಒಳಾಂಗಣದಲ್ಲಿಯೂ ಮಾಸ್ಕ್ ಧರಿಸುವುದು ಉತ್ತಮ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಸಾಮಾಜಿಕ ಮತ್ತು ಸಾರ್ವಜನಿಕ ಕಾರ್ಯಕ್ರಮಗಳನ್ನು ಸ್ವಸ್ಥ ಸಮಾಜದ ಹಿತದೃಷ್ಟಿಯಿಂದ ಹೊರಾಂಗಣದಲ್ಲಿ ಆಯೋಜಿಸಬೇಕು, ಕಾರ್ಖಾನೆ, ಕೈಗಾರಿಕಾ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು, ಕಡ್ಡಾಯವಾಗಿ ಮಾಸ್ಕ್‌ ಬಳಸಬೇಕು ಮತ್ತು ಅಂತರ ಕಾಪಾಡಿಕೊಳ್ಳಬೇಕು, ವಿಶೇಷವಾಗಿ ಒಳಾಂಗಣದಲ್ಲಿ ಮತ್ತು ಹೊರಾಂಗಣದಲ್ಲಿ ಗುಂಪು ಕೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು.ಕೋವಿಡ್-19 ಲಸಿಕೆಯ ಮುಂಜಾಗೃತ ಡೋಸ್ ಅನ್ನು ಶೀಘ್ರವಾಗಿ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದಲ್ಲಿ ಸೂಚಿಸಿದ್ದಾರೆ.

Exit mobile version