ಅಂಡಿಂಜೆ: ಅಂಡಿಂಜೆ ಗ್ರಾ.ಪಂ ಸಭಾಭವನದಲ್ಲಿ ಡಿ.26 ರಂದು ವಿಕಲಚೇತನರ ಸಮನ್ವಯ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಜಯಂತಿಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಭೆಯಲ್ಲಿ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಕುರಿತು ವಿಕಲಚೇತನರ ಸಂಯೋಜಕಿ ಕು| ಸುನಿತಾ ಇವರು ಮಾಹಿತಿ ನೀಡಿದರು. ಈ ವೇಳೆ ವಿಕಲಚೇತನ ಫಲಾನುಭವಿಗಳಿಗೆ ವೈದ್ಯಕೀಯ ಪ್ರಮಾಣಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಶ್ವೇತಾ, ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿ ರಾಘವೇಂದ್ರ , ಪಂಚಾಯತ್ ಕಾರ್ಯದರ್ಶಿ ಚಂಪಾ, ವಿಕಲಚೇತನ ಫಲಾನುಭವಿಗಳು ಭಾಗವಹಿಸಿದ್ದರು. ಪಂಚಾಯತ್ ಸಿಬ್ಬಂದಿ ಶೀನ ಕೆ ಇವರು ಸ್ವಾಗತಿಸಿ, ವಂದಿಸಿದರು. ಗ್ರಾ.ಪಂ ಸಿಬ್ಬಂದಿಗಳು ಸಹಕರಿಸಿದರು.
p>