Site icon Suddi Belthangady

ರಾಜ್ಯಮಟ್ಟದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಹೋಲಿ ರಿಡೀಮರ್ ಶಾಲೆಗೆ 100% ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸಿದ 2022-23ನೇ ಸಾಲಿನ ರಾಜ್ಯ ಮಟ್ಟದ ಚಿತ್ರಕಲಾ ಗ್ರೇಡ್ ಪರೀಕ್ಷೆಯು ಪುತ್ತೂರಿನ ಫಿಲೋಮಿನಾ ಕಾಲೇಜಿನಲ್ಲಿ ನಡೆಯಿತು. ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 32 ವಿದ್ಯಾರ್ಥಿಗಳು ಪರೀಕ್ಷೆ ಬರೆದು 10 ಮಂದಿ ಉನ್ನತ ಶ್ರೇಣಿ, 21 ಮಂದಿ ಪ್ರಥಮ ಶ್ರೇಣಿ ಹಾಗೂ ಒಬ್ಬರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿಗಳು 100% ಫಲಿತಾಂಶ ಗಳಿಸಿ ಶಾಲೆಯ ಘನತೆಯನ್ನು ಹೆಚ್ಚಿಸಿದ್ದಾರೆ. ಚಿತ್ರಕಲಾ ಶಿಕ್ಷಕರಾದ ಪ್ರವೀಣ್ ವರ್ಣಕುಟೀರ ಮತ್ತು ಸಹಶಿಕ್ಷಕಿ ಕು. ವಿನಿತಾ ಮೋರಸ್ ಸಹಕರಿಸಿದರು.

Exit mobile version